ಕಠಿಣ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ
ಭದ್ರಾವತಿಯಲ್ಲಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ವತಿಯಿಂದ ಸೋಮವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಆ. 7 : ಸಂಘ ಪರಿವಾರ ಹರಡಿದ ದ್ವೇಷದ ನಂಜು ದೇಶಕ್ಕೆ ಹಬ್ಬಿದೆ. ಮತೀಯ ಹಿಂಸಾಚಾರ, ಜನಾಂಗೀಯ ಕಲಹ, ಕೋಮು ದ್ವೇಷ ದೇಶವನ್ನು ಹೊತ್ತಿ ಉರಿಸುತ್ತಿದೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಮುಖಂಡರು ಆರೋಪಿಸಿದರು.
ಸೋಮವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಮುಖಂಡರು, ದಕ್ಷಿಣ ಕನ್ನಡದಲ್ಲಿ ಆ.5ರಂದು ಸಂಘ ಪರಿವಾರ ಹರಡಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರದಲ್ಲಿ ಜನಾಂಗೀಯ ಕಲಹ, ಹರಿಯಾಣದಲ್ಲಿ ಕೋಮು ಗಲಭೆ, ಮಹಾರಾಷ್ಟ್ರದಲ್ಲಿ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದ ನಾನಾ ಭಾಗಗಲ್ಲಿ ಹಿಂಸಾಚಾರ ಹಬ್ಬಿಕೊಂಡಿದೆ. ಇಂತಹ ಸನ್ನಿವೇಶಕ್ಕೆ ಕಾರಣವಾದ ಬಿಜೆಪಿ ಮತ್ತು ಸಂಘ ಪರಿವಾರದ ದ್ವೇಷದ ರಾಜಕಾರಣವನ್ನು ಖಂಡಿಸುತ್ತೇವೆ ಎಂದರು.
ಸರ್ಕಾರ ತಕ್ಷಣ ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳುಹಿಸದಂತೆ ಎಚ್ಚರ ವಹಿಸುವಂತೆ ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ಎಂ.ಡಿ ಗೌಸ್, ಜಿಲ್ಲಾ ಕಾರ್ಯದರ್ಶಿ ಎಂ.ಡಿ ಕಲೀಂಮುಲ್ಲಾ, ಜಿಲ್ಲಾ ಉಪಾಧ್ಯಕ್ಷ ದೇವೇಂದ್ರ ಪಾಟೀಲ್, ತಾಲೂಕು ಉಪಾಧ್ಯಕ್ಷ ಎಂ.ಡಿ ತಾಹೀರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.
No comments:
Post a Comment