ಪ್ರತಿಭಟನೆ ನಡೆಸಿ, ವೇದಿಕೆ ಸ್ಥಳವನ್ನು ನೀರಿನಿಂದ ಶುದ್ಧೀಕರಿಸಿದ ವಿದ್ಯಾರ್ಥಿಗಳು
ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮಕ್ಕೆ ಕಾಲೇಜಿನ ಕೆಲವು ವಿದ್ಯಾರ್ಥಿಗಳೇ ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಭದ್ರಾವತಿ, ಆ. ೮ : ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ಟ್ರಸ್ಟ್‌ಸಹಯೋಗದೊಂದಿಗೆ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮಕ್ಕೆ ಕಾಲೇಜಿನ ಕೆಲವು ವಿದ್ಯಾರ್ಥಿಗಳೇ ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರಾಜ್‌ರವರು ಸದಾ ದೇಶ ವಿರೋಧಿಗಳನ್ನು ಬೆಂಬಲಿಸುತ್ತಿದ್ದು, ಅವರಿಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಅರ್ಹತೆ ಇಲ್ಲ. ವಿದ್ಯಾರ್ಥಿಗಳ ಅಭಿಪ್ರಾಯ ಪಡೆಯದೆ ಕೆಲವು ವಿದ್ಯಾರ್ಥಿಗಳನ್ನು ಹೊರಗಿಟ್ಟು ಸಂವಾದ ನಡೆಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾನಿರತ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಎಸ್ ಹೊಸಳ್ಳೇರ ಮಾತನಾಡಿ, ಕಾರ್ಯಕ್ರಮ ಕುರಿತು ಮನವರಿಕೆ ಮಾಡಿಕೊಟ್ಟರು. ಆದರೂ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆ ಮುಂದುವರೆಸಿದರು. ಅಲ್ಲದೆ ಕೆಲವು ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದ ಸ್ಥಳವನ್ನು ನೀರಿನಿಂದ ಶುದ್ಧೀಕರಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆಗೆ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಬೆಂಬಲ ಸೂಚಿಸಿ ಕಾಲೇಜು ಆಡಳಿತ ಮಂಡಳಿ ನಡೆಯನ್ನು ಪ್ರಶ್ನಿಸಿದರು.
No comments:
Post a Comment