ಪಿ.ನಾಗರಾಜಪ್ಪ
ಭದ್ರಾವತಿ, ಆ. ೧೪ : ಸಿದ್ದಾರೂಢ ನಗರದ ನಿವಾಸಿ, ವಿಐಎಸ್‌ಎಲ್ ನಿವೃತ್ತ ನೌಕರ ಪಿ. ನಾಗರಾಜಪ್ಪ (೬೯) ಸೋಮವಾರ ನಿಧನ ಹೊಂದಿದರು.
ಪತ್ನಿ ಶಾರದಮ್ಮ, ಪುತ್ರ ಹಾಗು ಇಬ್ಬರು ಪುತ್ರಿಯರು ಇದ್ದಾರೆ. ಇವರ ಅಂತ್ಯ ಸಂಸ್ಕಾರ ಹಿರಿಯೂರು ಗ್ರಾಮದ ಇವರ ತೋಟದಲ್ಲಿ ನೆರವೇರಿತು.
ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ, ಮಡಿವಾಳ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
No comments:
Post a Comment