ಭದ್ರಾವತಿ, ಆ. ೨೧: ದ್ವಿಚಕ್ರ ವಾಹನ ಸವಾರನೋರ್ವ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರಗಾಯಗೊಂಡು ಮೃತಪಟ್ಟಿರುವ ಘಟನೆ ನಗರದ ಹೊಸಮನೆ ಮುಖ್ಯ ರಸ್ತೆಯಲ್ಲಿ ನಡೆದಿದೆ.
ದರ್ಶನ್ ಮೃತಪಟ್ಟಿದ್ದು, ಈತ ಆ.೨೦ರ ಬೆಳಗಿನ ಜಾವ ತನ್ನ ರಾಯಲ್ ಎನ್ಫೀಲ್ಡ್ ಹಿಮಾಲಯ ದ್ವಿಚಕ್ರವಾಹನದಲ್ಲಿ ಹೊಸಮನೆ ಮುಖ್ಯ ರಸ್ತೆಯ ಭವಾನಿ ಶಾಮಿಯಾನ ಅಂಗಡಿ ಮುಂಭಾಗ ಹೋಗುತ್ತಿರುವಾಗ ನಾಯಿಯೊಂದು ಅಡ್ಡ ಬಂದಿದ್ದರಿಂದ ಅದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ತಕ್ಷಣ ಈತನನ್ನು ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಈತನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ. ಈ ಸಂಬಂಧ ಈತನ ತಾಯಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
No comments:
Post a Comment