Tuesday, August 8, 2023

ಅಂತರಗಂಗೆ ಗ್ರಾ. ಪಂ. ಅಧ್ಯಕ್ಷರಾಗಿ ನಾಗೇಶ್‌, ಉಪಾಧ್ಯಕ್ಷರಾಗಿ ಗಂಗಮ್ಮ

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನಾಗೇಶ್‌ ಮತ್ತು  ಉಪಾಧ್ಯಕ್ಷರಾಗಿ ಗಂಗಮ್ಮ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ : ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ನಾಗೇಶ್‌ ಮತ್ತು  ಉಪಾಧ್ಯಕ್ಷರಾಗಿ ಗಂಗಮ್ಮ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
    ೧೫ ಸದಸ್ಯ ಬಲ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದ  ಅಧ್ಯಕ್ಷ ಸ್ಥಾನಕ್ಕೆ ಅಂತರಗಂಗೆ ನಾಗೇಶ್  ಮತ್ತು ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ  ಗಂಗಮ್ಮ  ತಲಾ ಒಂದು ಮತಗಳ ಅಂತರದಿಂದ ಆಯ್ಕೆಯಾದರು. ಚುನಾವಣೆಯಲ್ಲಿ ಎಲ್ಲಾ ೧೫ ಮಂದಿ ಸದಸ್ಯರು ಭಾಗವಹಿಸಿ ಮತಚಲಾಯಿಸಿದರು.
    ನೂತನ ಅಧ್ಯಕ್ಷರು- ಉಪಾಧ್ಯಕ್ಷರನ್ನು ಬ್ಲಾಕ್‌ ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಸ್. ಕುಮಾರ್, ತಾಲ್ಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಶ್ರೀನಿವಾಸ್, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಮುಖಂಡರುಗಳು, ಅಭಿಮಾನಿಗಳು, ಕಾರ್ಯಕರ್ತರು ಅಭಿನಂದಿಸಿದರು.

No comments:

Post a Comment