ಭದ್ರಾವತಿ, ಆ. 30: ಮಗನೊಬ್ಬ ಕುಡಿದ ಅಮಲಿನಲ್ಲಿ ತನ್ನ ತಾಯಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.
ಸುಲೋಚನಮ್ಮ(57) ಕೊಲೆಯಾದ ದುರ್ದೈವಿ. ಮಗ ಸಂತೋಷನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟ್ರ್ಯಾಕ್ಟರ್ ಚಾಲಕನಾಗಿರುವ ಸಂತೋಷ್ ಕುಡಿತದ ಚಟಕ್ಕೆ ಬಲಿಯಾಗಿದ್ದು, ಆಗಾಗ ತಾಯಿಯನ್ನು ಹಣಕ್ಕಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ.
ಇದರಿಂದ ಬೇಸತ್ತ ತಾಯಿ ಸುಲೋಚನಮ್ಮ ಮಗನೊಂದಿಗೆ ವಾಸವಿರದೆ ಪ್ರತ್ಯೇಕವಾಗಿ ವಾಸವಾಗಿದ್ದರು. ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ತಾಯಿ ಮನೆಗೆ ಬಂದಿದ್ದ ಸಂತೋಷ್ ಹಣ ಕೊಡುವಂತೆ ಪೀಡಿಸಿದ್ದಾನೆ. ಹಣ ನೀಡಲು ನಿರಾಕರಿಸಿದ ತಾಯಿಯೊಂದಿಗೆ ಜಗಳಕ್ಕಿಳಿದು ಅಲ್ಲಿಯೇ ಇದ್ದ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಸೋಮವಾರ ಮಧ್ಯಾಹ್ನ ಪಕ್ಕದ ಮನೆಯ ಮಹಿಳೆಯೊಬ್ಬರು ಸುಲೋಚನಮ್ಮ ಅವರ ಮನೆಗೆ ಹೋದಾಗ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ. ಸುಲೋಚನಮ್ಮ ಅವರ ಮೊದಲ ಮಗ ಮಂಗಳವಾರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಸಂಬಂಧ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್
ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment