ಭದ್ರಾವತಿ, ಆ. ೨೬ : ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಗುರುವೀರ ಮಡಿವಳ ಮಾಚಿದೇವ ಸಂಘದ ವತಿಯಿಂದ ಸೆ.೫ರಂದು ಬೆಳಿಗ್ಗೆ ೧೦.೩೦ಕ್ಕೆ ಮನ ಮನೆಗೆ ಮಾಚಿದೇವ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮ ಹಾಗು ನೂತನ ಸಮುದಾಯ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಶ್ರೀ ಬಸವ ಮಾಚಿದೇವ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ನೂತನ ಸಮುದಾಯ ಭವನ ಉದ್ಘಾಟಿಸಲಿದ್ದಾರೆ. ೨೦೨೩ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.
ಸೆ.೨ರೊಳಗೆ ಮಾಹಿತಿ ಸಲ್ಲಿಸಿ:
ಪ್ರತಿಭಾವಂತ ವಿದ್ಯಾರ್ಥಿಗಳು ಸೆ.೨ರ ಸಂಜೆ ೫ ಗಂಟೆಯೊಳಗೆ ಅಂಕಪಟ್ಟಿ, ಭಾವಚಿತ್ರ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಸಂಘದ ಕಛೇರಿಗೆ ತಲುಪಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೮೪೯೬೯೩೯೩೬೯ ಅಥವಾ ೯೯೭೨೭೧೭೦೦೯ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment