ಪಿಲ್ಲಿ ಇಸ್ರಾಯೆಲ್
ಭದ್ರಾವತಿ, ಆ. ೨೬: ನಗರದ ಉಜ್ಜನಿಪುರ ನಿವಾಸಿ, ಎಂಪಿಎಂ ನಿವೃತ್ತ ಗುತ್ತಿಗೆ ಕಾರ್ಮಿಕ ಪಿಲ್ಲಿ ಇಸ್ರಾಯೆಲ್(೬೦) ನಿಧನ ಹೊಂದಿದರು.
ಪತ್ನಿ, ಪುತ್ರ ಹಾಗು ಪುತ್ರಿ ಇದ್ದರು. ಹೃದಯಾಘಾತದಿಂದ ನಿಧನ ಹೊಂದಿದ್ದು, ನಗರದ ಬೈಪಾಸ್‌ರಸ್ತೆ ಮಿಲ್ಟ್ರಿಕ್ಯಾಂಪ್‌ಬಳಿ ಇರುವ ಪ್ರೊಟೆಸ್ಟೆಂಟ್‌ಕ್ರೈಸ್ತ ಸಮಾದಿಯಲ್ಲಿ ಇವರ ಅಂತ್ಯ ಸಂಸ್ಕಾರ ನೆರವೇರಿತು.
ಇಸ್ರಾಯೆಲ್‌ರವರು ಎಂಪಿಎಂ ಗುತ್ತಿಗೆ ಕಾರ್ಮಿಕ ಸಂಘದ ಸಮಿತಿ ಸದಸ್ಯರಾಗಿ ಹಾಗು ಸುಮಾರು ೧೦ ವರ್ಷಗಳಿಂದ ಬುಳ್ಳಾಪುರ ಸಿಎಸ್‌ಐ ತೆಲುಗು ಜೂಬ್ಲಿ ಚರ್ಚ್‌ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಇತ್ತೀಚೆಗೆ ನ್ಯೂಟೌನ್‌ಸೈಂಟ್‌ಚಾರ್ಲ್ಸ್‌ಶಾಲೆಯ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನಕ್ಕೆ ಸಿಎಸ್‌ಐ ತೆಲುಗು ಜೂಬ್ಲಿ ಚರ್ಚ್‌ಸಭಾ ಪಾಲಕರಾದ ರೆವರೆಂಡ್‌ಬಾಬಿರಾಜ್, ಸಮಿತಿ ಸದಸ್ಯರಾದ ಸುವರ್ಣಮ್ಮ, ಇಟ್ಟೆ ಸಂತೋಷ್‌ಕುಮಾರ್, ಚಲ್ತುರಿ ಡ್ಯಾನಿಯೆಲ್‌ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment