ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸುರವರ ೧೦೮ನೇ ಜನ್ಮದಿನಾಚರಣೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಭದ್ರಾವತಿ, ಆ. ೨೦: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗು ನಗರಸಭೆ ವತಿಯಿಂದ ಭಾನುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸುರವರ ೧೦೮ನೇ ಜನ್ಮದಿನಾಚರಣೆಯನ್ನು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಉದ್ಘಾಟಿಸಿದರು.
ಹಿಂದುಳಿದ ವರ್ಗಗಳ ಮುಖಂಡ ಟಿ. ವೆಂಕಟೇಶ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಡಿ. ದೇವರಾಜ ಅರಸು ಅವರ ಕುರಿತು ಮಾತನಾಡಿದರು.
ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ನಗರಸಭಾ ಸದಸ್ಯ ಬಸವರಾಜ ಬಿ. ಆನೆಕೊಪ್ಪ, ಡಿಎಸ್‌ಎಸ್ ಮುಖಂಡ ರಂಗನಾಥ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಟಿ. ರಾಜೇಶ್ವರಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
No comments:
Post a Comment