ಮನೋಹರ್
ಭದ್ರಾವತಿ, ಆ. ೨೮ : ಶಿವಮೊಗ್ಗ ಜಿಲ್ಲಾ ಯೋಜನಾ ನಿರ್ದೇಶಕರಾಗಿ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿ ಮನೋಹರ್ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದಿನ ಯೋಜನಾಧಿಕಾರಿಯಾಗಿದ್ದ ಎಂ.ಎಂ ಕರಭೀಮಣ್ಣನವರ್ ವಯೋನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ತೆರವಾಗಿದ್ದ ಹುದ್ದೆಗೆ ಮನೋಹರ್ ಅವರನ್ನು ಸರ್ಕಾರ ನೇಮಕಗೊಳಿಸಿದ್ದು, ಮನೋಹರ್‌ರವರು ಈ ಹಿಂದೆ ಎರಡು ಬಾರಿ ಇಲ್ಲಿನ ನಗರಸಭೆ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಕೆಎಂಎಎಸ್ ಗ್ರೇಡ್-೧ ಅಧಿಕಾರಿಯಾಗಿರುವ ಮನೋಹರ್‌ರವರು ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಜಿಲ್ಲಾ ಯೋಜನಾ ನಿರ್ದೇಶಕರಾಗಿರುವುದು ಇಲ್ಲಿನ ಜನರಲ್ಲಿ ಸಂತಸವನ್ನುಂಟು ಮಾಡಿದೆ.
No comments:
Post a Comment