ಸಂಸದ ಬಿ.ವೈ ರಾಘವೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಬಿ.ವೈ ರಾಘವೇಂದ್ರ ಅಭಿಮಾನಿ ಬಳಗ ಹಾಗೂ ಬಿಜೆಪಿ ಮಂಡಲ ವತಿಯಿಂದ ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು.
ಭದ್ರಾವತಿ, ಆ. ೧೮: ಸಂಸದ ಬಿ.ವೈ ರಾಘವೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಬಿ.ವೈ ರಾಘವೇಂದ್ರ ಅಭಿಮಾನಿ ಬಳಗ ಹಾಗೂ ಬಿಜೆಪಿ ಮಂಡಲ ವತಿಯಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಬಿ.ವೈ ರಾಘವೇಂದ್ರ ಅಭಿಮಾನಿ ಬಳಗ ಹಾಗೂ ಬಿಜೆಪಿ ಮಂಡಲ ವತಿಯಿಂದ ಸಂಸದ ಬಿ.ವೈ ರಾಘವೇಂದ್ರ ಅವರ ಹುಟ್ಟುಹಬ್ಬ ಆಚರಿಸಲಾಯಿತು.
ನಗರದ ವಿವಿಧ ದೇವಸ್ಥಾನಗಳಲ್ಲಿ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಾಗೂ ಬ್ರೆಡ್ ವಿತರಿಸಲಾಯಿತು.
ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಜಿಲ್ಲಾ ಕಾರ್ಯದರ್ಶಿ ಎಂ. ಪ್ರಭಾಕರ್. ಮಂಡಲ ಪ್ರಧಾನ ಕಾರ್ಯದರ್ಶಿ ಚೆನ್ನೇಶ್. ಮುಖಂಡರಾದ ನಗರಸಭಾ ಸದಸ್ಯ ವಿ. ಕದಿರೇಶ್, ಮಂಗೋಟೆ ರುದ್ರೇಶ್. ಮಂಜುನಾಥ್ ಕದಿರೇಶ್. ತೀರ್ಥಯ್ಯ. ಜಿ. ಆನಂದ್‌ಕುಮಾರ್, ಎಂ. ಮಂಜುನಾಥ್, ಮಂಡಲ ಉಪಾಧ್ಯಕ್ಷೆ ಅನ್ನಪೂರ್ಣ ಸಾವಂತ್ ಹಾಗು ವಿವಿಧ ಮೋರ್ಚಾಗಳ ಮತ್ತು ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ಆಸ್ಪತ್ರೆ ವೈದ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment