ರೈತರಿಂದ ಎಕ್ಸಿಕ್ಯುಟಿವ್ ಇಂಜಿನಿಯರ್ಗೆ ಎಚ್ಚರಿಕೆ
ಭದ್ರಾ ಜಲಾಶಯದಿಂದ ನಾಲೆಗಳಿಗೆ ಹರಿಸುತ್ತಿರುವ ನೀರು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಶಾಖೆ ವತಿಯಿಂದ ಮಂಗಳವಾರ ಭದ್ರಾವತಿ ಮಿಲ್ಟ್ರಿಕ್ಯಾಂಪ್ ನೀರಾವರಿ ಇಲಾಖೆ ಎಕ್ಸಿಕ್ಯುಟಿವ್ ಇಂಜಿನಿಯರ್ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ಭದ್ರಾ ಜಲಾಶಯದಿಂದ ನಾಲೆಗಳಿಗೆ ಹರಿಸುತ್ತಿರುವ ನೀರು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಶಾಖೆ ವತಿಯಿಂದ ಮಂಗಳವಾರ ನಗರದ ಮಿಲ್ಟ್ರಿಕ್ಯಾಂಪ್ ನೀರಾವರಿ ಇಲಾಖೆ ಎಕ್ಸಿಕ್ಯುಟಿವ್ ಇಂಜಿನಿಯರ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ಹಿಂದೆ ಹೋರಾಟ ನಡೆಸಿದ ಪರಿಣಾಮ ಭದ್ರಾ ಕಾಡಾ ಸಭೆಯಲ್ಲಿ ನೀರು ಹರಿಸಲು ಆಫ್ ಅಂಡ್ ಆನ್ ಪದ್ದತಿ ಅನುಸರಿಸಲು ತೀರ್ಮಾನಿಸಲಾಗಿತ್ತು. ಈ ತೀರ್ಮಾನದ ಪ್ರಕಾರ ಸೆ. 16ರಂದು ನೀರು ನಿಲ್ಲಿಸಬೇಕಾಗಿತ್ತು. ಆದರೆ ಇಲ್ಲಿಯವರೆಗೂ ನೀರು ನಿಲ್ಲಿಸಿಲ್ಲ. ಈಗ ನೀರು ನಿಲ್ಲಿಸದ್ದಿದ್ದಲ್ಲಿ ಬೇಸಿಗೆಯಲ್ಲಿ ಅಡಕೆ ತೋಟಗಳು ಒಣಗಿಹೋಗುತ್ತವೆ. ಈ ಹಿನ್ನೆಲೆಯಿಂದ ತಕ್ಷಣವೇ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಲಾಯಿತು.
ಒಂದು ವೇಳೆ ನೀರು ನಿಲ್ಲಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿ ಎಕ್ಸಿಕ್ಯುಟಿವ್ ಇಂಜಿನಿಯರ್ಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಇಂಜಿನಿಯರ್ ಬುಧವಾರದೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ರೈತರು ಅಂತಿಮವಾಗಿ ಬುಧವಾರ ಬೆಳಿಗ್ಗೆವರೆಗೂ ಕಾದು ನೋಡಲಾಗುವುದು. ಒಂದು ವೇಳೆ ನೀರು ನಿಲ್ಲಿಸದಿದ್ದಲ್ಲಿ ಮುಂದಿನ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಪ್ರಮುಖರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಬಾಲಕೃಷ್ಣ, ಎಸ್. ಮಣಿಶೇಖರ್, ಹನುಮಂತು, ಟಿ.ಡಿ ಶಶಿಕುಮಾರ್, ಎಚ್. ರವಿಕುಮಾರ್, ರೈತ ಮುಖಂಡರಾದ ಎಸ್. ಶಿವಮೂರ್ತಿ, ಜಿ.ಎನ್ ಪಂಚಾಕ್ಷರಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment