ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಎಸ್‌ಎಸ್‌ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಹಾಗು ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವೃತ್ತಿಪರ ವಿಷಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ ದಾಖಲೆಗಳ ನಕಲು ಪ್ರತಿಗಳೊಂದಿಗೆ ಸೆ.30ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿಗಳು ಸಂಘದ ಕಛೇರಿಯಲ್ಲಿ ದೊರೆಯು ತ್ತವೆ. ಹೆಚ್ಚಿನ ಮಾಹಿತಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಮೊ: 9110457125 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment