ಸೂಕ್ತ ಕ್ರಮಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹಿಸಿ ಮನವಿ
ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತ ಸೇರಿದಂತೆ ಈ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಒಟ್ಟು 3 ಶುದ್ಧ ಕುಡಿಯುವ ನೀರಿನ ಘಟಕಗಳು ಸೂಕ್ತ ನಿರ್ವಹಣೆ ಇಲ್ಲದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾಗಿವೆ. ಈ ಹಿನ್ನೆಲೆಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪೌರಾಯುಕ್ತ ಎಚ್.ಎಂ ಮನುಕುಮಾರ್ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ಹಳೇನಗರದ ಬಸವೇಶ್ವರ ವೃತ್ತ ಸೇರಿದಂತೆ ಈ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಒಟ್ಟು 3 ಶುದ್ಧ ಕುಡಿಯುವ ನೀರಿನ ಘಟಕಗಳು ಸೂಕ್ತ ನಿರ್ವಹಣೆ ಇಲ್ಲದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾಗಿವೆ. ಈ ಹಿನ್ನೆಲೆಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪೌರಾಯುಕ್ತ ಎಚ್.ಎಂ ಮನುಕುಮಾರ್ ಮನವಿ ಸಲ್ಲಿಸಲಾಯಿತು.
2019-20ರ ಸಾಲಿನಲ್ಲಿ ಸುಮಾರು ಹತ್ತು ಲಕ್ಷ ರೂ ವೆಚ್ಚದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸಾರ್ವಜನಿಕರಿಗೆ ಉಪಯೋಗವಾಗದೆ ಹಾಳಾಗಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಆಗ್ರಹಿಸಲಾಗಿದೆ.
ಈ ವ್ಯಾಪ್ತಿಯ 3 ಘಟಕಗಳು ನಿರ್ಮಾಣಗೊಂಡಾಗಿನಿಂದಲೂ ಕಾರ್ಯನಿರ್ವಹಿಸುತ್ತಿಲ್ಲ. ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿ ಕೊಡುವಂತೆ ಕೋರಲಾಗಿದೆ.
ಕೆ ಆರ್ ಎಸ್ ಪಕ್ಷದ ತಾಲೂಕು ಅಧ್ಯಕ್ಷ ನಾಗರಾಜ್ ಸಿಂದೆ, ಪ್ರಧಾನ ಕಾರ್ಯದರ್ಶಿ ತೀರ್ಥ ಕುಮಾರ್, ಮುಖಂಡರಾದ ದಯಾನಂದ್ ಬಿ.ಎಸ್ ಉಪಸ್ಥಿತರಿದ್ದರು.
No comments:
Post a Comment