ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಉತ್ಸವ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ಭದ್ರಾವತಿ: ನಾಡಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಉತ್ಸವ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
ನಗರದ ಬಿ.ಎಚ್ ರಸ್ತೆ, ಅಪ್ಪರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಸಂಜೆ ೫ ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿ ಹಾಗು ನಂದಿ ಧ್ವಜಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು, ವಿವಿಧ ಶಾಲೆಗಳ ಸ್ಥಬ್ದ ಚಿತ್ರಗಳು, ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ, ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ರಾಮೇಶ್ವರ ಸ್ವಾಮಿ, ಶ್ರೀ ಹಳದಮ್ಮ ದೇವಿ, ಶ್ರೀ ಕಾಳಿಕಾಂಬ ದೇವಿ, ಶ್ರೀ ಕೋಟೆ ಬಸವಣ್ಣ ಸ್ವಾಮಿ, ಭೋವಿ ಕಾಲೋನಿ ಶ್ರೀ ಪಿಳ್ಳಗಮ್ಮ ದೇವಿ, ಶ್ರೀ ಸವದತ್ತಿ ಯಲ್ಲಮ್ಮ, ಶ್ರೀ ಶೆಟ್ಟಮ್ಮದೇವಿ, ಶ್ರೀ ಲಕ್ಷ್ಮಮ್ಮ ದೇವಿ, ಶ್ರೀ ಸಿಗಂದೂರು ಚೌಡೇಶ್ವರಿ, ಶ್ರೀ ಕಾಲರಮ್ಮ ದೇವಿ, ಕುಕ್ಕುವಾಡೇಶ್ವರಿ ದೇವಿ, ಶ್ರೀ ಕೋಟೆ ಮಾರಿಯಮ್ಮ ದೇವಿ, ದಾನವಾಡಮ್ಮ, ತಮ್ಮಣ್ಣ ಕಾಲೋನಿ ಶ್ರೀ ಚೌಡೇಶ್ವರಿ ದೇವಿ, ಸಂತೇ ಮೈದಾನದ ಶ್ರೀ ಸುಂಕಲಮ್ಮ ದೇವಿ, ನ್ಯೂಟೌನ್ ಫ್ಲೇಗ್ ಮಾರಿಯಮ್ಮ, ಭೂತನಗುಡಿ ಶ್ರೀ ಶನೇಶ್ವರ ಸ್ವಾಮಿ, ವಿಜಯನಗರ ಶ್ರೀ ಶನಿದೇವರು, ಬಿ.ಎಚ್ ರಸ್ತೆ ಶ್ರೀ ವಿಶ್ವಸ್ವರೂಪಿಣಿ ಮಾರಿಯಮ್ಮ ದೇವಿ, ತಮ್ಮಣ್ಣ ಕಾಲೋನಿ ಮರದಮ್ಮ ದೇವಿ, ಚಾಮೇಗೌಡ ಏರಿಯಾ, ಮೀನುಗಾರರ ಬೀದಿ, ಜನ್ನಾಪುರ ಶ್ರೀ ಮಾರಿಯಮ್ಮ ದೇವಿ, ಚನ್ನಗಿರಿ ರಸ್ತೆ ಶ್ರೀ ಮಾರಿಕಾಂಬ ದೇವಿ, ನ್ಯೂಟೌನ್ ಶ್ರೀ ಮಾತಂಗಮ್ಮ ದೇವಿ, ಹಳೇನಗರ ಉಪ್ಪಾರಕೇರಿ ಶ್ರೀ ಅಂತರಘಟ್ಟಮ್ಮ, ಗೌಳಿಗರ ಬೀದಿ ಶ್ರೀ ರಾಮೇಶ್ವರ ಸ್ವಾಮಿ, ದೊಣಬಘಟ್ಟ ರಸ್ತೆ ಶ್ರೀ ರಂಗನಾಥ ಸ್ವಾಮಿ, ಶಿವರಾಮನಗರ ಶ್ರೀ ಯಲ್ಲಮ್ಮ ದೇವಿ, ಗೌಳಿಗರ ಬೀದಿ ಶ್ರೀ ಕರುಮಾರಿಯಮ್ಮ ದೇವಿ, ಬಸವೇಶ್ವರ ವೃತ್ತದ ಶ್ರೀ ಕುರುಪೇಶ್ವರಿ ದೇವಿ, ಶ್ರೀ ಕುಕ್ಕುವಾಡೇಶ್ವರಿ ದೇವಿ, ಹೊಸಮನೆ ಶ್ರೀ ಕೆರೆಕೋಡಮ್ಮ ದೇವಿ, ರಂಗಪ್ಪ ವೃತ್ತ ಶ್ರೀ ಗುಳ್ಳಮ್ಮ ದೇವಿ, ಅಂಬೇಡ್ಕರ್‌ನಗರ(ಕಂಚಿನ ಬಾಗಿಲು ವೃತ್ತ) ದುರ್ಗಾಂಬ ದೇವಿ, ದುರ್ಗಿ ನಗರದ ಶ್ರೀ ದುರ್ಗಮ್ಮ ದೇವಿ, ಜೈಭೀಮ್ ನಗರದ ಶ್ರೀ ದೊಡ್ಡಮ್ಮ ದೇವಿ, ಕಂಚಿನಬಾಗಿಲು ಮತ್ತು ಬಿ.ಎಚ್ ರಸ್ತೆ ಶ್ರೀ ಚೌಡೇಶ್ವರಿ ದೇವಿ ಹಾಗು ತರೀಕೆರೆ ರಸ್ತೆಯ ಶ್ರೀ ಧರ್ಮಶಾಸ್ತ ಅಯ್ಯಪ್ಪಸ್ವಾಮಿ ಸೇರಿದಂತೆ ಸುಮಾರು ೫೦ ದೇವಸ್ಥಾನಗಳ ಅಲಂಕೃತಗೊಂಡ ದೇವಾನುದೇವತೆಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.
![](https://blogger.googleusercontent.com/img/b/R29vZ2xl/AVvXsEhqLOCdTMTtkbN9q2TXr0diYf3qkX3wXf7nMIWtaHo0yAIVM4lL9LQVo5Vi551LitnV724SzFf6UmqgEb-pnRIBXk7212lwEaJQlwxTkA0ewywxmggxpkq9f3Znphci9FEL6U499xXonzg0r2izQhSNX2qpBHAzbtB8EbV0eCojouu5CRcp8VqVLSzhyHdh/w400-h300-rw/D24-BDVT(a).jpg)
ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ ಹಾಗು ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರಾದ ಬಸವರಾಜ್, ಜಾರ್ಜ್, ಆರ್. ಮೋಹನ್ ಕುಮಾರ್, ಬಷೀರ್ ಅಹಮದ್, ವಿ. ಕದಿರೇಶ್, ಬಿ.ಟಿ ನಾಗರಾಜ್, ಬಿ.ಕೆ ಮೋಹನ್, ಅನುಸುಧಾ ಮೋಹನ್ ಪಳನಿ, ಲತಾ ಚಂದ್ರಶೇಖರ್, ಪ್ರೇಮ ಬದರಿನಾರಾಯಣ, ಶಶಿಕಲಾ ನಾರಾಯಣಪ್ಪ, ಗೀತಾ ರಾಜ್‌ಕುಮಾರ್, ಅನುಪಮ ಚನ್ನೇಶ್, ಕಾಂತರಾಜ್, ಕೋಟೇಶ್ವರರಾವ್, ಉದಯ್‌ಕುಮಾರ್, ರಿಯಾಜ್ ಅಹಮದ್, ಪಲ್ಲವಿ ದಿಲೀಪ್, ನಾಗರತ್ನ ಅನಿಲ್‌ಕುಮಾರ್, ಜಯಶೀಲ ಸುರೇಶ್, ಸವಿತಾ ಉಮೇಶ್, ರೇಖಾ ಪ್ರಕಾಶ್, ಮಂಜುಳ ಸುಬ್ಬಣ್ಣ, ಅನಿತಾ ಮಲ್ಲೇಶ್, ಆರ್. ಶ್ರೇಯಸ್(ಚಿಟ್ಟೆ), ಬಿ.ಎಂ ರವಿಕುಮಾರ್ ಹಾಗು ಅಧಿಕಾರಿಗಳಾದ ರಾಜ್‌ಕುಮಾರ್, ಪ್ರಭಾಕರ್, ಸುಹಾಸಿನಿ ಮತ್ತು ಪೌರಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು, ದಸರಾ ಉದ್ಘಾಟಕರು, ಸಮಾಜ ಸೇವಕರಾದ ಪಿ. ವೆಂಕಟರಮಣ ಶೇಟ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ನೌಕರರು ಸೇರಿದಂತೆ ಇನ್ನಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮೆರವಣಿಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತ ಮೂಲಕ ಕನಕಮಂಟಪ ಮೈದಾನ ತಲುಪಿತು. ನಂತರ ಬನ್ನಿ ಮುಡಿಯುವ ಕಾರ್ಯಕ್ರಮ ಜರುಗಿತು. ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ||ಬ್ರ|| ರಂಗನಾಥಶರ್ಮರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.