ಭದ್ರಾವತಿ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬುಧವಾರ ಭಕ್ತ ವೃಂದದಿಂದ ಏರ್ಪಡಿಸಲಾಗಿದ್ದ ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ದೀಪಬೆಳಗಿಸಿ ಶ್ರೀಚಾಮುಂಡೇಶ್ವರಿ ದೇವಿಗೆ ಪುಷ್ಪಾ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ: ಕ್ಷೇತ್ರದ ಜನರಿಗೆ ಯಾವುದೇ ರೀತಿ ಸಮಸ್ಯೆಗಳು ಎದುರಾಗದಿರಲಿ. ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ದುರ್ಗ ಸಪ್ತಶತಿ ಪಾರಾಯಣದ ಮೂಲಕ ಅಮ್ಮನವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ಹೇಳಿದರು.
ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬುಧವಾರ ಭಕ್ತ ವೃಂದದಿಂದ ಏರ್ಪಡಿಸಲಾಗಿದ್ದ ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣದಲ್ಲಿ ಪಾಲ್ಗೊಂಡು ಮಾತನಾಡಿದರು.
ನವದುರ್ಗೆಯರ ಆರಾಧನೆಯಲ್ಲಿ ವಿಶಿಷ್ಟವಾದ ಶಕ್ತಿ ಇದೆ. ನಮ್ಮಲ್ಲಿರುವ ದುರ್ಗುಣಗಳು ನಾಶವಾಗಿ ಒಳ್ಳೆಯ ಗುಣಗಳು ವೃದ್ಧಿಸಲಿ. ಎಲ್ಲರ ಬದುಕು ಒಳ್ಳೆಯದಾಗಲಿ ಎಂಬುದು ನವರಾತ್ರಿ ಆಚರಣೆಯ ಉದ್ದೇಶವಾಗಿದೆ. ದುರ್ಗ ಸಪ್ತಶತಿ ಪಾರಾಯಣದ ಮೂಲಕ ಅಮ್ಮನವರಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಪಾರ್ಥಿಸುವ ಕಾರ್ಯಕ್ರಮ ಪ್ರತಿ ವರ್ಷ ಆಯೋಜಿಸಿಕೊಂಡು ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಎಲ್ಲರಿಗೂ ಒಳಿತನ್ನು ಬಯಸುತ್ತೇನೆ ಎಂದರು.
ಆರಂಭದಲ್ಲಿ ದೀಪ ಬೆಳಗಿಸುವ ಮೂಲಕ ಶ್ರೀ ಚಾಮುಂಡೇಶ್ವರಿಗೆ ದೇವಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ವಿನಯ್ ಗುರೂಜಿಯವರು ಸಭಾಭವನದ ಮಾಲೀಕರಾದ ಶಿವಕುಮಾರ್ ದಂಪತಿ ಸನ್ಮಾನಿಸಿ ಅಭಿನಂದಿಸಿದರು.
ಭಕ್ತ ವೃಂದದ ಪ್ರಮುಖರಾದ ಬಿ. ಮೂರ್ತಿ, ಎಂ.ಎಸ್ ರವಿ, ವೈ. ನಟರಾಜ್, ಬಿ.ಎಸ್ ಬಸವೇಶ್, ರವಿಕುಮಾರ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಅಪೇಕ್ಷ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ವೆಂಕಟ್ ಗಿರಿ ವಂದಿಸಿದರು.
ಭದ್ರಾವತಿ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬುಧವಾರ ಭಕ್ತ ವೃಂದದಿಂದ ಏರ್ಪಡಿಸಲಾಗಿದ್ದ ಕ್ಷೇತ್ರದ ಅಭಿವೃದ್ಧಿಗಾಗಿ ದುರ್ಗ ಸಪ್ತಶತಿ ಪಾರಾಯಣ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ಸಭಾಭವನದ ಮಾಲೀಕರಾದ ಶಿವಕುಮಾರ್ ದಂಪತಿ ಸನ್ಮಾನಿಸಿ ಅಭಿನಂದಿಸಿದರು.
No comments:
Post a Comment