ಗಂಗಪ್ಪ
ಭದ್ರಾವತಿ : ತಾಲೂಕಿನ ಮಾವಿನಕೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ನ್ಯಾಯಬೆಲೆ ಅಂಗಡಿ ಮಾಲೀಕ ಗಂಗಪ್ಪ(೬೫) ನಿಧನ ಹೊಂದಿದರು.
ಪತ್ನಿ, ೪ ಪುತ್ರಿಯರು, ಓರ್ವ ಪುತ್ರ ಇದ್ದರು. ಗಂಗಪ್ಪ ಕೆಂಚನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಗ್ರಾಮ ಪಂಚಾಯಿತಿಗೆ ೩ ಬಾರಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಒಂದು ಬಾರಿ ಅಧ್ಯಕ್ಷರಾಗಿ, ಮತ್ತೊಂದು ಬಾರಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಕಾಳಿಂಗನಹಳ್ಳಿ ಮತ್ತು ಕೆಂಪೇಗೌಡ ನಗರ ನ್ಯಾಯಬೆಲೆ ಅಂಗಡಿ ಮಾಲೀಕರಾಗಿದ್ದರು.
ಇವರ ಅಂತ್ಯಕ್ರಿಯೆ ಕೆಂಚನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನೆರವೇರಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್ ಕುಮಾರ್, ಯುವ ಮುಖಂಡ ಬಿ. ಎಸ್ ಗಣೇಶ್, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷರಾದ ಸಿದ್ದಲಿಂಗಯ್ಯ ಸೇರಿದಂತೆ ನ್ಯಾಯಬೆಲೆ ಅಂಗಡಿಗಳ ಮಾಲೀಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment