Friday, October 27, 2023

ವಿಐಎಸ್‌ಎಲ್ ಉಳಿವಿಗಾಗಿ ಗಣಹೋಮ

ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಯಲಿ ಎಂಬ ಆಶಯದೊಂದಿಗೆ ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವೃತ್ತ(ಎಸ್‌ಎವಿ ಸರ್ಕಲ್)ದಲ್ಲಿ ೧೩ನೇ ವರ್ಷದ ವಿನಾಯಕ ಚತುರ್ಥಿ ಅಂಗವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಶುಕ್ರವಾರ ಗಣಹೋಮ ನಡೆಯಿತು.
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಯಲಿ ಎಂಬ ಆಶಯದೊಂದಿಗೆ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವೃತ್ತ(ಎಸ್‌ಎವಿ ಸರ್ಕಲ್)ದಲ್ಲಿ ೧೩ನೇ ವರ್ಷದ ವಿನಾಯಕ ಚತುರ್ಥಿ ಅಂಗವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಶುಕ್ರವಾರ ಗಣಹೋಮ ನಡೆಯಿತು.  
    ಕಾಗದನಗರ ೭ನೇ ವಾರ್ಡ್ ನಾಗರಕಟ್ಟೆ ದೇವಸ್ಥಾನದ ಕಿರಿಯ ಅರ್ಚಕರಾದ ಚಿನ್ಮಯಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ವಿಐಎಸ್‌ಎಲ್ ಕಾರ್ಖಾನೆ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರು, ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.
    ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಈ ಹಿಂದೆ ಶಿವಮೊಗ್ಗದಿಂದ ವಿಐಎಸ್‌ಎಲ್ ಕಾರ್ಖಾನೆವರೆಗೂ ಪಾದಯಾತ್ರೆ ಕೈಗೊಂಡಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಡಾ. ನೇತ್ರಾವತಿ, ಮುಖಂಡರಾದ ಮರಿಯಪ್ಪ, ಪ್ರದೀಪ್, ರಾಧಾ, ರಾಮಕೃಷ್ಣ, ನಗರಸಭೆ ಮಾಜಿ ಸದಸ್ಯ ಆಂಜನಪ್ಪ ಸೇರಿದಂತೆ ಇನ್ನಿತರರು ವಿನಾಯಕ ಮೂರ್ತಿ ದರ್ಶನ ಪಡೆದರು. ವಿನಾಯಕ ಸೇವಾ ಸಮಿತಿ ವತಿಯಿಂದ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾಂಗ್ರೆಸ್ ಮುಖಂಡರಾದ ಎಚ್. ರವಿಕುಮಾರ್, ರಮೇಶ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
    ಗಣಹೋಮ ಪೂರ್ಣಾಹುತಿ ನಂತರ ಅನ್ನಸಂತರ್ಪಣೆ ನೆರವೇರಿತು. ಅ.೨೮ರ ಶನಿವಾರ ಮೂರ್ತಿ ವಿಸರ್ಜನೆ ನಡೆಯಲಿದೆ.


ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಈ ಹಿಂದೆ ಶಿವಮೊಗ್ಗದಿಂದ ವಿಐಎಸ್‌ಎಲ್ ಕಾರ್ಖಾನೆವರೆಗೂ ಪಾದಯಾತ್ರೆ ಕೈಗೊಂಡಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಡಾ. ನೇತ್ರಾವತಿ, ಮುಖಂಡರಾದ ಮರಿಯಪ್ಪ, ಪ್ರದೀಪ್, ರಾಧಾ, ನಗರಸಭೆ ಮಾಜಿ ಸದಸ್ಯ ಆಂಜನಪ್ಪ ಸೇರಿದಂತೆ ಇನ್ನಿತರರು ಎಸ್‌ಎವಿ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ದರ್ಶನ ಪಡೆದರು. ವಿನಾಯಕ ಸೇವಾ ಸಮಿತಿ ವತಿಯಿಂದ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

No comments:

Post a Comment