ಭದ್ರಾವತಿ ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ಬಿ.ಕೆ ಸಂಗಮೇಶ್ವರ್‌ರವರು ತಮ್ಮ ೬೧ನೇ ಹುಟ್ಟುಹಬ್ಬ ಶನಿವಾರ ಶಿರಡಿ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಆಚರಿಸಿಕೊಂಡರು.
ಭದ್ರಾವತಿ: ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ಬಿ.ಕೆ ಸಂಗಮೇಶ್ವರ್‌ರವರು ತಮ್ಮ ೬೧ನೇ ಹುಟ್ಟುಹಬ್ಬ ಶನಿವಾರ ಶಿರಡಿ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಆಚರಿಸಿಕೊಂಡರು.
ಕ್ಷೇತ್ರದ ಅಭಿವೃದ್ಧಿಗಾಗಿ ಕುಟುಂಬ ವರ್ಗದವರೊಂದಿಗೆ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಪ್ರಾರ್ಥಿಸುವ ಮೂಲಕ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಹುಟ್ಟುಹಬ್ಬದ ಶುಭಾಶಯ ಕೋರಿದ ಕ್ಷೇತ್ರದ ಪ್ರತಿಯೊಬ್ಬರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಂಗಮೇಶ್ವರ್ ತಿಳಿಸಿದ್ದಾರೆ.
ಶಾಸಕರೊಂದಿಗೆ ಸಹೋದರರಾದ ಉದ್ಯಮಿಗಳಾದ ಬಿ.ಕೆ ಜಗನ್ನಾಥ್, ಬಿ.ಕೆ ಶಿವಕುಮಾರ್, ಪುತ್ರರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಕುಟುಂಬ ವರ್ಗದವರು, ಹಿತೈಷಿಗಳು ಶಿರಡಿ ಶ್ರೀ ಸಾಯಿಬಾಬಾ ಕ್ಷೇತ್ರಕ್ಕೆ ತೆರಳಿದ್ದಾರೆ.
ಸಂಗಮೇಶ್ವರ್‌ರವರು ಕಳೆದ ಬಾರಿ ತಮ್ಮ ೬೦ನೇ ಹುಟ್ಟುಹಬ್ಬ ಹಳೇನಗರದ ಕನಕಮಂಟಪ ಮೈದಾನದಲ್ಲಿ ಅದ್ದೂರಿಯಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.
No comments:
Post a Comment