Monday, October 2, 2023

ವಿದ್ಯಾಮಂದಿರ ಬಳಿ ಫ್ಲೆಕ್ಸ್ ತೆರವು : ಪ್ರತಿಭಟನೆ

ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಭದ್ರಾವತಿ ವಿದ್ಯಾಮಂದಿರ ಬಳಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ.

    ಭದ್ರಾವತಿ: ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾಮಂದಿರ ಬಳಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ.

    ಹಬ್ಬ ಮುಗಿದ ಹಿನ್ನಲೆಯಲ್ಲಿ ನಗರಸಭೆ ಸಿಬ್ಬಂದಿಗಳು ಭಾನುವಾರ ರಾತ್ರಿಯೇ ಫ್ಲೆಕ್ಸ್ ತೆರವು ಕಾರ್ಯಾಚರಣೆಗೆ ಮುಂದಾಗಿದ್ದು, ಬೆಳಿಗ್ಗೆ 4 ಗಂಟೆಗೆ ಮುಕ್ತಾಯಗೊಂಡಿದೆ ಎನ್ನಲಾಗಿದೆ. ಈ ನಡುವೆ ಬೆಳಿಗ್ಗೆ ಮುಸ್ಲಿಂ ಸಮುದಾಯದವರು ಏಕಾಏಕಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ಫ್ಲೆಕ್ಸ್ ಹರಿದು ಹಾಕಲಾಗಿದೆ ಎಂದು ಆರೋಪಿಸಿದ್ದರು.

    ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು, ಪೊಲೀಸರು ಆಗಮಿಸಿದ್ದು, ತೆರವು ಕುರಿತು ಸ್ಪಷ್ಟನೆ ನೀಡಿದ್ದಾರೆ. ಉದ್ದೇಶ ಪೂರ್ವಕವಾಗಿ ಯಾವುದೇ ಫ್ಲೆಕ್ಸ್ ಹರಿದು ಹಾಕಿಲ್ಲ ಎಂದು ಮನವರಿಕೆ ಮಾಡಿದ್ದು, ಈ ನಡುವೆ ಮುಸ್ಲಿಂ ಸಮುದಾಯದವರು ಇನ್ನೂ ಹಬ್ಬ ಬಾಕಿ ಇದ್ದು, ಅನ್ನಸಂತರ್ಪಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಫ್ಲೆಕ್ಸ್ ಅಳವಡಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಮಸೀದಿ ಬಳಿ ಒಂದೇ ಒಂದು ಫ್ಲೆಕ್ಸ್ ಅಳವಡಿಕೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.

    ನಗರಸಭೆ ಸದಸ್ಯ ಚನ್ನಪ್ಪ, ಯುವ ಮುಖಂಡ ಬಿ.ಎಸ್ ಗಣೇಶ್, ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀ ಶೈಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment