ಪ್ರೊ. ವಿಜಯಾದೇವಿ
ಭದ್ರಾವತಿ: ನಗರದ ನಿವಾಸಿ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ, ಎಮೆರಿಟಸ್ ಪ್ರೊ. ವಿಜಯಾದೇವಿಯವರಿಗೆ `ಡಾ. ಎ.ಪಿ.ಜೆ ಅಬ್ದುಲ್ ಕಲಾಂ' ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ.
ಪ್ರೊ. ವಿಜಯಾದೇವಿಯವರು ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಬೆಂಗಳೂರಿನ ನಡೆದಾಡುವ ದೇವರ ಸೇವಾ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಅ.೨೨ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂರವರ ೯೨ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ವಿಜಯಾದೇವಿಯವರಿಗೆ ರಾಜ್ಯ ಮತ್ತು ಜಿಲ್ಲಾಮಟ್ಟದ ಪ್ರಶಸ್ತಿ, ಬಿರುದುಗಳು ಸಂದಿವೆ. ಶಿಕ್ಷಣ ಹಾಗು ಸಾಹಿತ್ಯ ಕ್ಷೇತ್ರದಲ್ಲಿ ಇವರ ಸೇವೆ ಇಂದಿಗೂ ಮುಂದುವರೆದಿದೆ.
No comments:
Post a Comment