ಭದ್ರಾವತಿ ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಶನಿವಾರ ಒಕ್ಕಲಿಗರ ಸಮುದಾಯ ಭವನದಲ್ಲಿ ನರರೋಗ ಮತ್ತು ಕೀಲು ಮೂಳೆ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರಾದ ಡಾ. ಜಯಚಂದ್ರ ಮತ್ತು ಡಾ. ಗಿರೀಶ್ ಉದ್ಘಾಟಿಸಿದರು.
ಭದ್ರಾವತಿ : ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಶನಿವಾರ ಒಕ್ಕಲಿಗರ ಸಮುದಾಯ ಭವನದಲ್ಲಿ ನರರೋಗ ಮತ್ತು ಕೀಲು ಮೂಳೆ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರಾದ ಡಾ. ಜಯಚಂದ್ರ ಮತ್ತು ಡಾ. ಗಿರೀಶ್ ಉದ್ಘಾಟಿಸಿದರು. ಟ್ರಸ್ಟ್ ಪದಾಧಿಕಾರಿಗಳಾದ ಅಧ್ಯಕ್ಷ ಹೇಮಂತ್ ಕುಮಾರ್, ಕಾರ್ಯದರ್ಶಿ ಚರಣ್‌ರಾಜ್, ಗೌರವಾಧ್ಯಕ್ಷರಾದ ಸುರೇಶ್, ಕುಮಾರ್, ನಗರಸಭಾ ಸದಸ್ಯ ಆರ್. ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಶನಿವಾರ ಒಕ್ಕಲಿಗರ ಸಮುದಾಯ ಭವನದಲ್ಲಿ ನರರೋಗ ಮತ್ತು ಕೀಲು ಮೂಳೆ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಮಂದಿಗೆ ಉಚಿತ ತಪಾಸಣೆ ನಡೆಸಲಾಯಿತು. ಆಸ್ಪತ್ರೆಯ ಒಟ್ಟು ೪ ವೈದ್ಯರು ಹಾಗು ೭ ಸಿಬ್ಬಂದಿಗಳನ್ನೊಳಗೊಂಡ ತಂಡ ಶಿಬಿರದಲ್ಲಿ ಪಾಲ್ಗೊಂಡಿತ್ತು.
ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಈಗಾಗಲೇ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಹೆಚ್ಚಿನ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಉತ್ಸುಕವಾಗಿದ್ದು, ಜನರ ಸಹಕಾರ, ಪ್ರೋತ್ಸಾಹದ ನಿರೀಕ್ಷೆಯಲ್ಲಿದೆ.
No comments:
Post a Comment