ಭದ್ರಾವತಿ: ನಾಡಹಬ್ಬ ದಸರಾ ಅಂಗವಾಗಿ ನಗರಸಭೆ ವತಿಯಿಂದ ಅ.೧೭ ರಿಂದ ೧೯ರವರೆಗೆ ೩ ದಿನಗಳ ವರೆಗೆ ದಸರಾ ಕ್ರೀಡಾಕೂಟ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪುರುಷರಿಗೆ ಕ್ರಿಕೆಟ್, ಕಬ್ಬಡಿ, ಕುಸ್ತಿ, ಹಗ್ಗ-ಜಗ್ಗಾಟ ಮತ್ತು ಮಹಿಳೆಯರಿಗೆ ಹಗ್ಗ-ಜಗ್ಗಾಟ, ಗುಂಡು ಎಸೆತ, ಟೈರ್ & ಸ್ಟಿಕ್ ಮತ್ತು ಲೆಮೆನ್ ಇನ್ ಸ್ಪೂನ್ ಸ್ಪರ್ಧೆಗಳು ನಡೆಯಲಿವೆ.
ಅ.೧೭ರಂದು ಬೆಳಿಗ್ಗೆ ೯.೩೦ಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಕ್ರೀಡಾಕೂಟ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿರುವರು.
ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವವರು, ನೋಂದಾಯಿತ ಸಂಘ-ಸಂಸ್ಥೆಗಳು ಅ.೧೩ರ ಸಂಜೆ ೫ ಗಂಟೆಯೊಳಗೆ ಡಿ.ಎಸ್ ಹೇಮಂತಕುಮಾರ್, ಮೊ: ೯೪೮೧೯೭೦೨೬೫ ಅಥವಾ ಎಂ.ಎಸ್ ಬಸವರಾಜು, ಮೊ: ೭೭೬೦೦೫೭೭೧೬೬ ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ ಎಂದು ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಚನ್ನಪ್ಪ, ಕಾರ್ಯದರ್ಶಿ ಎಂ. ಸುವಾಸಿನಿ ಕೋರಿದ್ದಾರೆ.
No comments:
Post a Comment