ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕ್ರೀಡಾಕೂಟದ ಆರಂಭದಲ್ಲಿ ನಗರಸಭೆ ಅಧ್ಯಕ್ಷೆ ಬ್ಯಾಟ್ ಹಿಡಿದು ಆಡುವ, ಪೌರಾಯುಕ್ತ ಬೌಲಿಂಗ್ ಮಾಡುವ ಮೂಲಕ ಸಂಭ್ರಮಿಸಿ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.
ಭದ್ರಾವತಿ: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕ್ರೀಡಾಕೂಟದ ಆರಂಭದಲ್ಲಿ ನಗರಸಭೆ ಅಧ್ಯಕ್ಷೆ ಬ್ಯಾಟ್ ಹಿಡಿದು ಆಡುವ, ಪೌರಾಯುಕ್ತ ಬೌಲಿಂಗ್ ಮಾಡುವ ಮೂಲಕ ಸಂಭ್ರಮಿಸಿ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.
ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ ಸೇರಿದಂತೆ ಮಹಿಳಾ ಸದಸ್ಯರು ಒಂದೆಡೆ ಬ್ಯಾಟ್ ಹಿಡಿದು ಆಡುವ ಮೂಲಕ ಹಾಗು ಪೌರಾಯುಕ್ತ ಎಚ್.ಎಂ ಮನುಕುಮಾರ್, ಸದಸ್ಯರಾದ ಜಾರ್ಜ್, ಬಷೀರ್ ಅಹಮದ್, ಆರ್. ಮೋಹನ್‌ಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಬೌಲಿಂಗ್ ಮಾಡುವ ಮೂಲಕ ಸಂಭ್ರಮಿಸಿದರು.
ದಸರಾ ಕ್ರೀಡಾಕೂಟದಲ್ಲಿ ಕ್ರಿಕೆಟ್ ಆರಂಭಿಕ ಕ್ರೀಡೆಯಾಗಿದ್ದು, ಪುರುಷರಿಗೆ ಕ್ರಿಕೆಟ್, ಕಬ್ಬಡಿ, ಕುಸ್ತಿ, ಹಗ್ಗ-ಜಗ್ಗಾಟ ಮತ್ತು ಮಹಿಳೆಯರಿಗೆ ಹಗ್ಗ-ಜಗ್ಗಾಟ, ಗುಂಡು ಎಸೆತ, ಟೈರ್ & ಸ್ಟಿಕ್ ಮತ್ತು ಲೆಮೆನ್ ಇನ್ ಸ್ಪೂನ್ ಸ್ಪರ್ಧೆಗಳು ನಡೆಯಲಿವೆ.
No comments:
Post a Comment