Friday, October 27, 2023

ವಕೀಲರ ಸಂಘದ ಅಧ್ಯಕ್ಷರಾಗಿ ಉಮೇಶ್

ಭದ್ರಾವತಿ ತಾಲೂಕು ವಕೀಲರ ಸಂಘದ ಚುನಾವಣೆ ಶುಕ್ರವಾರ ನಡೆದಿದ್ದು, ನೂತನ ಅಧ್ಯಕ್ಷರಾಗಿ ಉಮೇಶ್ ಆಯ್ಕೆಯಾಗಿದ್ದಾರೆ.
    ಭದ್ರಾವತಿ: ತಾಲೂಕು ವಕೀಲರ ಸಂಘದ ಚುನಾವಣೆ ಶುಕ್ರವಾರ ನಡೆದಿದ್ದು, ನೂತನ ಅಧ್ಯಕ್ಷರಾಗಿ ಉಮೇಶ್ ಆಯ್ಕೆಯಾಗಿದ್ದಾರೆ.
    ಪ್ರತಿ ೨ ವರ್ಷಗಳಿಗೆ ನಡೆಯುವ ಚುನಾವಣೆಯಲ್ಲಿ ಈ ಬಾರಿ ಅಧ್ಯಕ್ಷರಾಗಿ ಉಮೇಶ್, ಉಪಾಧ್ಯಕ್ಷರಾಗಿ ಬಿ.ಎಸ್ ನಾಗರಾಜ್, ಕಾರ್ಯದರ್ಶಿಯಾಗಿ ರಾಕೇಶ್, ಸಹ ಕಾರ್ಯದರ್ಶಿಯಾಗಿ ಹರೀಶ್ ಬರ್ಗೆ ಮತ್ತು ಖಜಾಂಚಿಯಾಗಿ ಆಶಾ ಆಯ್ಕೆಯಾಗಿದ್ದಾರೆ. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ, ನ್ಯಾಯವಾದಿ ಕೆ.ಎನ್ ಶ್ರೀಹರ್ಷ ೨ ವರ್ಷಗಳವರೆಗೆ ಅಧ್ಯಕ್ಷರಾಗಿದ್ದರು.
    ನೂತನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಯುವ ಮುಖಂಡ, ನ್ಯಾಯವಾದಿ ಮಂಗೋಟೆ ರುದ್ರೇಶ್ ಸೇರಿದಂತೆ ಹಿರಿಯ ನ್ಯಾಯವಾದಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಅಭಿನಂದಿಸಿದ್ದಾರೆ.

No comments:

Post a Comment