ಶ್ವೇತಾ
ಭದ್ರಾವತಿ: ತಾಲೂಕಿನ ಕಾಗೇಕೋಡಮಗ್ಗೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕರಾದ ಮಂಜುಳಾ ಬಸವರಾಜ್‌ರವರ ಪುತ್ರಿ ಶ್ವೇತಾ(೩೭) ಅನಾರೋಗ್ಯದಿಂದ ಬುಧವಾರ ಮೃತಪಟ್ಟಿದ್ದಾರೆ.
ಪತಿ ಹೇಮಂತ್ ಕುಮಾರ್ ಇದ್ದರು. ಅನಾರೋಗ್ಯಕ್ಕೆ ಒಳಗಾಗಿದ್ದ ಶ್ವೇತಾರನ್ನು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿತು.
ಕರ್ನಾಟಕ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ನ್ಯಾಯಬೆಲೆ ಅಂಗಡಿ ಮಾಲೀಕರು ಸಂತಾಪ ಸೂಚಿಸಿದ್ದಾರೆ.
No comments:
Post a Comment