ಭದ್ರಾವತಿ : ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ನ.೧೧ರಂದು ಶ್ರೀಮದ್ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ, ಲಿಂಗೈಕ್ಯ ಶ್ರೀ ಗುರು ಸಿದ್ಧಶಿವಾಚಾರ್ಯ ಸ್ವಾಮಿಗಳ ಹಾಗು ಲಿಂಗೈಕ್ಯ ಶ್ರೀ ರಾಚೋಟಿ ಶಿವಾಚಾರ್ಯ ಸ್ವಾಮಿಗಳ ೫೬ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗು ಧರ್ಮ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೬ ಗಂಟೆಗೆ ಗಂಗೆ ಪೂಜೆಯೊಂದಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಶ್ರೀ ವೀರಭದ್ರಸ್ವಾಮಿಗೆ ಮತ್ತು ಶ್ರೀ ಶಕ್ತಿ ಮಾತೆ ಚೌಡೇಶ್ವರಿ ದೇವಿಗೆ ರುದ್ರಾಭಿಷೇಕ, ಕುಂಕುಮಾರ್ಚನೆ, ಅಷ್ಟೋತ್ತರ ಪೂಜೆ ನೆರವೇರಲಿದೆ. ೮ ಗಂಟೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ, ೧೧.೩೦ಕ್ಕೆ ಧರ್ಮ ಸಮಾರಂಭ ನಡೆಯಲಿದೆ.
ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದಾರೆ.
ಎಡೆಯೂರು ಬಾಳೆಹೊನ್ನೂರು ಖಾಸಾ ಶಾಖಾ ಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಹುಲಿಕೆರೆ ದೊಡ್ಡಮಠದ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು. ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಗೌರವಾಧ್ಯಕ್ಷ ಟಿ.ವಿ ಈಶ್ವರಯ್ಯ ನೇತೃತ್ವ ವಹಿಸಲಿದ್ದಾರೆ.
ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ, ಶಾಸಕರಾದ ಬಿ.ವೈ ವಿಜಯೇಂದ್ರ, ಎಸ್.ಎನ್ ಚನ್ನಬಸಪ್ಪ, ಶಾರದ ಪೂರ್‍ಯಾನಾಯ್ಕ, ಎಸ್. ರುದ್ರೇಗೌಡ, ಡಿ.ಎಸ್ ಅರುಣ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
No comments:
Post a Comment