ಭದ್ರಾವತಿ ಸಿದ್ಧಾರೂಢನಗರದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ೬೮ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ ಬಿಳಕಿ ಹಿರೇಮಠದ ಷ|| ಬ್ರ|| ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿದರು.
ಭದ್ರಾವತಿ: ಸಿದ್ಧಾರೂಢನಗರದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ೬೮ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ ಬಿಳಕಿ ಹಿರೇಮಠದ ಷ|| ಬ್ರ|| ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿದರು.
ಸಿದ್ದಾರೂಢನಗರದ ಶ್ರೀ ಶೃಗೇರಿ ಶಂಕರ ಮಠದ ಸಮೀಪ ೨ ದಿನಗಳ ಕಾಲ ಕಾರ್ಯಕ್ರಮ ಆಯೋಜಿಸಿದ್ದು, ನಗರಸಭೆ ಪೌರಾಯುಕ್ತ ಮನುಕುಮಾರ್, ಜೇಡಿಕಟ್ಟೆ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಶಾಂತಕುಮಾರ್, ಲಕ್ಷ್ಮೀಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನ.೧೯ರ ಸಂಜೆ ೬ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ವಿಶ್ರಾಂತ ಪ್ರಾಚಾರ್ಯ ಎಚ್. ಭುವನೇಶ್ವರ್ `ಕನ್ನಡದ ಸ್ಥಿತಿ, ಗತಿ' ಕುರಿತು ಉಪನ್ಯಾಸ ನೀಡಲಿದ್ದಾರೆ. ಹಿರಿಯ ನಾಗರೀಕರಿಗೆ, ಪಿಯುಸಿ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ.
No comments:
Post a Comment