ಭದ್ರಾವತಿಯಲ್ಲಿ ಮಂಗಳವಾರ ರಾತ್ರಿ ಸಿಡಿಲು ಬಡಿದು ಮೃತಪಟ್ಟ ಬೀರ-ಸುರೇಶ್.
ಭದ್ರಾವತಿ: ಸಿಡಿಲು ಬಡಿದು ಸಹೋದರರಿಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್‌ನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗೌಳಿಗರ ಕ್ಯಾಂಪ್ ನಿವಾಸಿಗಳಾದ ಬೀರ(32) ಮತ್ತು ಸುರೇಶ್(30) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮಂಗಳವಾರ ರಾತ್ರಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಜಮೀನಿನಲ್ಲಿದ್ದ ಈ ಇಬ್ಬರಿಗೂ ಏಕಾಏಕಿ ಸಿಡಿಲು ಬಡಿದಿದೆ. ಇದರಿಂದಾಗಿ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತದೇಹಗಳನ್ನು ಬುಧವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಯಿತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment