ಭದ್ರಾವತಿ: ನಗರದಲ್ಲಿ ನ.೪ ಮತ್ತು ೫ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರು ಶುಕ್ರವಾರ ನಗರಕ್ಕೆ ಆಗಮಿಸಿದ್ದಾರೆ.

ನಗರದ ಹೊರವಲಯ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಭದ್ರಾ ಜಲಾಶಯ ಸಮೀಪದ ಜಂಗಲ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಬೆಳಿಗ್ಗೆ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬಸ್ಥರು ಹಾಗು ಅಭಿಮಾನಿಗಳು ಬಹದ್ದೂರ್‌ರವರನ್ನು ಸ್ವಾಗತಿಸಿದರು.
ನ.೪ರ ಬೆಳಿಗ್ಗೆ ೧೦ ಗಂಟೆಗೆ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಲಾಗಿರುವ ಶತಮಾನೋತ್ಸವ ಬಹದ್ದೂರ್‌ರವರು ಉದ್ಘಾಟಿಸಲಿದ್ದು, ಕೇಂದ್ರ ಹಾಗು ರಾಜ್ಯ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ವಿವಿಧ ಕ್ಷೇತ್ರಗಳ ಸಾಧಕರು ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
No comments:
Post a Comment