ಭದ್ರಾವತಿ ನ್ಯೂಟೌನ್ ಸೇಂಟ್ ಚಾರ್ಲ್ಸ್ ಕರುಣ ಸೇವಾ ಕೇಂದ್ರದಲ್ಲಿ ಪ್ರೌಢಶಾಲೆ ಮಕ್ಕಳಿಗೆ `ಮಾನವ ಕಳ್ಳ ಸಾಗಾಣಿಕೆ ಮಾಹಿತಿ' ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ : ಮಕ್ಕಳ ಹಕ್ಕುಗಳ ರಕ್ಷಣೆಯೊಂದಿಗೆ ಅವರು ಅಭಿವೃದ್ಧಿ ಪಥದಲ್ಲಿ ಸಾಗಲು ಎಲ್ಲರೂ ಶ್ರಮಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯೋಜಕ ಪ್ರಮೋದ್ ಕರೆ ನೀಡಿದರು.
ಅವರು ನ್ಯೂಟೌನ್ ಸೇಂಟ್ ಚಾರ್ಲ್ಸ್ ಕರುಣ ಸೇವಾ ಕೇಂದ್ರದಲ್ಲಿ ಪ್ರೌಢಶಾಲೆ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ `ಮಾನವ ಕಳ್ಳ ಸಾಗಾಣಿಕೆ ಮಾಹಿತಿ' ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳ ರಕ್ಷಣೆಗಾಗಿ ವಿಶ್ವಸಂಸ್ಥೆ ಜಾರಿಗೊಳಿಸಿರುವ ೪ ಮೂಲಭೂತ ಹಕ್ಕುಗಳ ಕುರಿತು ವಿವರಿಸಿ ಮಕ್ಕಳು ಮೊಬೈಲ್ ದುರ್ಬಳಕೆಯಿಂದ ದಾರಿ ತಪ್ಪದಂತೆ ಎಚ್ಚರವಹಿಸಬೇಕೆಂದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯೋಜಕಿ ಶೃತಿ, ಲೈಂಗಿಕ ದೌರ್ಜನ್ಯ ಹಾಗು ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ನೀಡಿ ಮಕ್ಕಳು ಸಾಧನೆಯ ಪಥದಲ್ಲಿ ಮುನ್ನಡೆಯಬೇಕೆಂದರು. ಅಲ್ಲದೆ ಬಾಲ್ಯವಿವಾಹ ತಡೆಗಟ್ಟಲು ಮಕ್ಕಳಿಗೆ ಅರಿವು ಮೂಡಿಸುವುದರ ಜೊತೆಗೆ ಮಕ್ಕಳ ಸಹಾಯವಾಣಿ ಹಾಗೂ ಮಕ್ಕಳ ಕಳ್ಳಸಾಗಾಣಿಕೆ ಕುರಿತು ತಿಳುವಳಿಕೆ ನೀಡಿದರು.
ಸೇಂಟ್ ಚಾರ್ಲ್ಸ್ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಸಾ ಡಿಕಾಸ್ಟ, ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆ ಮುಖ್ಯಸ್ಥೆ ಸಿಸ್ಟರ್ ಪ್ರಭ, ಕರುಣಾ ಸೇವಾ ಕೇಂದ್ರದ ನಿರ್ದೇಶಕಿ ಹೆಲೆನ್ ಮೋರಸ್, ಕಾರ್ಯಕರ್ತೆಯರಾದ ಗ್ರೇಸಿ, ವಿನಿ, ಧನಲಕ್ಷ್ಮಿ ಹಾಗೂ ಸೇಂಟ್ ಚಾರ್ಲ್ಸ್ ಪ್ರೌಢಶಾಲೆ ಶಿಕ್ಷಕ ವೃಂದ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಸುಮಾರು ೧೭೫ ಪ್ರೌಢ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
No comments:
Post a Comment