ಭದ್ರಾವತಿ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಭಾನುವಾರ ಬೆಳಿಗ್ಗೆ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಹಿರಿಯ ಕಾರ್ಮಿಕ ಮುಖಂಡ ಎಸ್.ಎನ್ ಬಾಲಕೃಷ್ಣ ಮಾತನಾಡಿದರು.
ಭದ್ರಾವತಿ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಭಾನುವಾರ ಬೆಳಿಗ್ಗೆ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು.
ಶತಮಾನೋತ್ಸವ ಆಚರಣಾ ಸಮಿತಿ ಪ್ರಮುಖರು, ನಿವೃತ್ತ ಅಧಿಕಾರಿಗಳು, ಕಾರ್ಮಿಕರು ತಮ್ಮ ವೃತ್ತಿ ಸೇವೆಯನ್ನು ಸ್ಮರಿಸಿ ಪ್ರಸ್ತುತ ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳಿಂದ ಹೊರಬರುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಲಹೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಆರಂಭದಲ್ಲಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರಿಂದ ಗಾಯನ ನಡೆಯಿತು. ವೇದಿಕೆಯಲ್ಲಿ ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಎಸ್. ದೊಡ್ಡಣ್ಣ, ಉಪಾಧ್ಯಕ್ಷರಾದ ಚಿಕ್ಕರಿಯಪ್ಪ, ಯು. ಅಮರನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಎಂ.ವಿ ರೇವಣ್ಣ ಸಿದ್ದಯ್ಯ, ಕಾರ್ಯದರ್ಶಿಗಳಾದ ಎಸ್.ಎಸ್ ಶ್ರೀನಾಥ್, ಗುರುಬಸಪ್ಪ ಬೂಸನೂರು, ಬಿ.ಟಿ ಶ್ರೀನಿವಾಸಗೌಡ, ಕೋಶಾಧ್ಯಕ್ಷ ಜೆ.ಎಸ್ ನಾಗಭೂಷಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಮುಖರಾದ ಹಿರಿಯ ಕಾರ್ಮಿಕ ಮುಖಂಡ ಎಸ್.ಎನ್ ಬಾಲಕೃಷ್ಣ, ನಿವೃತ್ತ ಉಪನ್ಯಾಸಕಿ ಡಾ. ವಿಜಯದೇವಿ, ಜನಾರ್ಧನ ರಾವ್ ಸೇರಿದಂತೆ ಇನ್ನಿತರರು ತಮ್ಮ ಅನಿಸಿಕೆ, ಸಲಹೆ , ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಮಾರೋಪ ಸಮಾರಂಭಕ್ಕೆ ಬಾರದ ಸಿ.ಎಂ, ಡಿ.ಸಿ.ಎಂ:
ಶತಮಾನೋತ್ಸವ ಸಮಾರಂಭಕ್ಕೆ ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗು ರಾಜ್ಯ ಸಚಿವರು, ಸಂಸದರು, ಶಾಸಕರು ಆಗಮಿಸುವ ನಿರೀಕ್ಷೆ ಇತ್ತು. ಆದರೆ ಯಾರು ಸಹ ಆಗಮಿಸಲಿಲ್ಲ. ಶನಿವಾರ ನಡೆದ ಉದ್ಘಾಟನೆ ಸಮಾರಂಭದಲ್ಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಎಸ್. ರುದ್ರೇಗೌಡ ಹೊರತುಪಡಿಸಿ ಉಳಿದಂತೆ ಕೇಂದ್ರ ಸಚಿವರು, ಸಂಸದರು, ಜಿಲ್ಲೆಯ ಶಾಸಕರು ಪಾಲ್ಗೊಂಡಿರಲಿಲ್ಲ.
No comments:
Post a Comment