ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ದಲಿತ ಚಳುವಳಿಯ ರೂವಾರಿ, ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನ ಭದ್ರಾವತಿ ಹಳೇನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಪರಿಶಿಷ್ಟ ಜಾತಿ/ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ದಲಿತ ಚಳುವಳಿಯ ರೂವಾರಿ, ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನ ಹಳೇನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಆಚರಿಸಲಾಯಿತು.
ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್ ಹಾಲೇಶಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಹಿರಿಯ ಸದಸ್ಯ ಬಿ.ಕೆ ಮೋಹನ್, ಪ್ರಗತಿಪರ ಹೋರಾಟಗಾರ ಸುರೇಶ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮತ್ತು ದಲಿತ ಮುಖಂಡ ಹನುಮಂತಪ್ಪ ಕಲ್ಲಿಹಾಳ್, . ಸಮಿತಿ ಜಿಲ್ಲಾ ದಲಿತ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಎಸ್. ಗೋವಿಂದರಾಜು, ಸಮಿತಿ ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ರುದ್ರಮ್ಮ, ಸಮಿತಿ ಹಿರಿಯೂರು ಹೋಬಳಿ ಸಂಚಾಲಕ ಅಣ್ಣಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಆರ್. ಹರೀಶ್, ಶಿವಮೊಗ್ಗ ತಾಲೂಕು ಪ್ರಧಾನ ಸಂಚಾಲಕರಾದ ಶೇಷಪ್ಪ ಹುಣುಸೂಡು, ಪರಮೇಶ್ ಸೂಗೂರು, ಮಂಜಣ್ಣ, ಸಂತೋಷ್ ಹಿರಿಯೂರು, ಗೋವಿಂದ್ ಕಾಶಿಪುರ, ಟಿ. ಮಹೇಶ್ ಅತ್ತಿಗುಂದ, ಡಿ. ನರಸಿಂಹಮೂರ್ತಿ, ರಾಮನಾಯ್ಕ, ಪ್ರಭು, ಹನುಮಂತು, ದುರ್ಗಪ್ಪ, ನವೀನ, ಈಶ್ವರಪ್ಪ, ರಾಜು, ರಮೇಶ್, ನಿಂಗಣ್ಣ, ಬಸವರಾಜ್, ಮನು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಿತಿ ತಾಲೂಕು ಪ್ರಧಾನ ಸಂಚಾಲಕ ಎಸ್. ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಪರಿಶಿಷ್ಟ ಜಾತಿ/ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಇದಕ್ಕೂ ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ಅಕ್ಕಮಹಾದೇವಿ ಸಮುದಾಯ ಭವನದವರೆಗೂ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು.
No comments:
Post a Comment