ಭದ್ರಾವತಿ ನಗರಕ್ಕೆ ಆಗಮಿಸಿರುವ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರನ್ನು ಸೋಮವಾರ ಅನುದಾನ ರಹಿತ ವಿದ್ಯಾಸಂಸ್ಥೆಗಳ ಸಂಘದ ಪ್ರಮುಖರು ಬಿಆರ್‌ಪಿ ಜಂಗಲ್ ರೆಸಾರ್ಟ್ ಅತಿಥಿಗೃಹದಲ್ಲಿ ಭೇಟಿ ಮಾಡಿ ಸನ್ಮಾನಿಸುವ ಮೂಲಕ ಗೌರವಿಸಿದರು.
ಭದ್ರಾವತಿ : ನಗರಕ್ಕೆ ಆಗಮಿಸಿರುವ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರನ್ನು ಸೋಮವಾರ ಅನುದಾನ ರಹಿತ ವಿದ್ಯಾಸಂಸ್ಥೆಗಳ ಸಂಘದ ಪ್ರಮುಖರು ಬಿಆರ್‌ಪಿ ಜಂಗಲ್ ರೆಸಾರ್ಟ್ ಅತಿಥಿಗೃಹದಲ್ಲಿ ಭೇಟಿ ಮಾಡಿ ಸನ್ಮಾನಿಸುವ ಮೂಲಕ ಗೌರವಿಸಿದರು.
ಅನುದಾನ ರಹಿತ ವಿದ್ಯಾ ಸಂಸ್ಥೆಗಳ ಸಂಘದ ಕಾರ್ಯದರ್ಶಿ ಹಾಗೂ ನಗರದ ವಿಇಎಸ್ ವಿದ್ಯಾಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ ಮತ್ತು ಹಾಗೂ ತಾಲೂಕು ಅನುದಾನಿತ ಶಾಲೆಗಳ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ನಾಗರಾಜ್‌ರವರು ಮೊದಲ ಬಾರಿಗೆ ಆಗಮಿಸಿರುವ ಒಡೆಯರ್‌ರವರನ್ನು ಸನ್ಮಾನಿಸಿ ಗೌರವಿಸಿದರು. ಅಲ್ಲದೆ ಮೈಸೂರು ಮಹಾರಾಜರ ಕೊಡುಗೆಗಳನ್ನು ಸ್ಮರಿಸಿ ಪ್ರಸ್ತುತ ಕ್ಷೇತ್ರದ ಸ್ಥಿತಿಗತಿಗಳನ್ನು ವಿವರಿಸಿದರು.
No comments:
Post a Comment