ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಸವಿತಾ ಸಮಾಜ ಮನವಿ
ರಾಜಕೀಯ, ಆರ್ಥಿಕ ಹಾಗು ಸಾಮಾಜಿಕವಾಗಿ ಹಿಂದುಳಿದಿರುವ ಸವಿತಾ ಸಮಾಜಕ್ಕೆ ಸರ್ಕಾರ ತಕ್ಷಣ ಮೀಸಲಾತಿ ನೀಡುವ ಜೊತೆಗೆ ಜಾತಿ ನಿಂದನೆ ಕಾಯ್ದೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ರಾಜಕೀಯ, ಆರ್ಥಿಕ ಹಾಗು ಸಾಮಾಜಿಕವಾಗಿ ಹಿಂದುಳಿದಿರುವ ಸವಿತಾ ಸಮಾಜಕ್ಕೆ ಸರ್ಕಾರ ತಕ್ಷಣ ಮೀಸಲಾತಿ ನೀಡುವ ಜೊತೆಗೆ ಜಾತಿ ನಿಂದನೆ ಕಾಯ್ದೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರಮುಖರು ಮಾತನಾಡಿ, ಸಮಾಜದಲ್ಲಿ ಕ್ಷೌರಿಕ ವೃತ್ತಿ ಹಾಗು ಮಂಗಳವಾದ್ಯ ಮತ್ತು ಪಾರಂಪರಿಕ ವೈದ್ಯ ಪದ್ದತಿ ನಂಬಿ ಬದುಕುತ್ತಿರುವ ಸವಿತಾ ಸಮಾಜದವರು ಶೋಷಣೆಗೆ ಒಳಗಾಗಿದ್ದಾರೆ. ರಾಜಕೀಯ, ಆರ್ಥಿಕ ಹಾಗು ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಈಗಾಗಲೇ ಪಾರಂಪರಿಕ ವೈದ್ಯ ಪದ್ದತಿ ಕಸಿದುಕೊಳ್ಳಲಾಗಿದ್ದು, ಪ್ರಸ್ತುತ ಕ್ಷೌರಿಕ ವೃತ್ತಿ ಸಹ ಅನ್ಯರ ಪಾಲಾಗುತ್ತಿದೆ. ಇದರಿಂದಾಗಿ ಬದುಕುವುದು ಕಷ್ಟಕರವಾಗಿದ್ದು, ಈ ನಡುವೆ ಜಾತಿ ನಿಂದನೆ ಕಾಯ್ದೆ ಜಾರಿಗೊಳಿಸದಿರುವುದು ನೋವುಂಟು ಮಾಡಿದೆ ಎಂದು ಅಳಲು ತೋರ್ಪಡಿಸಿಕೊಂಡರು.
ಸರ್ಕಾರ ತಕ್ಷಣ ಮುಂದಿನ ವರ್ಷ ಜ.೧೫ರೊಳಗಾಗಿ ಸಮಾಜದ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಸಮಾಜದ ಶ್ರೀ ಸವಿತಾನಂದನಾಥ ಸ್ವಾಮೀಜಿಯವರು ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೂ ಪಾದಯಾತ್ರೆ ನಡೆಸಿ ನಂತರ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಸವಿತಾ ಸಮುದಾಯದವರು ಇದಕ್ಕೆ ಸಂಪೂರ್ಣ ಬೆಂಬಲ ನೀಡಲಿದ್ದಾರೆಂದು ಎಚ್ಚರಿಸಿದರು.
ಸವಿತಾ ಸಹಕಾರ ಸಂಘದ ಅಧ್ಯಕ್ಷ ಎಂ. ಪರಮೇಶ್, ಸವಿತಾ ಸಮಾಜದ ಉಪಾಧ್ಯಕ್ಷರಾದ ಎನ್. ವೆಂಕಟೇಶ್, ಕೆ. ಓಬಳೇಶ್, ಜಿ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ರಾಜು ರೆಡ್‌ಸನ್, ಸಹಕಾರ್ಯದರ್ಶಿ ಬಿ.ಎನ್ ಮಹೇಶ್‌ಕುಮಾರ್, ಖಜಾಂಚಿ ಎಸ್.ವಿ ನರಸಿಂಹಮೂರ್ತಿ, ಸಹಕಾರ್ಯದರ್ಶಿಗಳಾದ ಎನ್. ರಮೇಶ್, ಪಿ.ವಿ ಸುರೇಶ್, ಸಲಹೆಗಾರ ಗಣೇಶಣ್ಣ, ನಿರ್ದೇಶಕರಾದ ಶಿವಶಂಕರ್, ವಾಸು, ಅನಿಲ್‌ಕುಮಾರ್, ಲೋಕೇಶ್, ಹರೀಶ್, ನಾಗರಾಜ್, ರವಿಚಂದ್ರ, ಕುಮಾರ್ ಹಾಗು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಧುಮಾಲತಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment