ಜಿ. ಮಂಜುನಾಥ್
ಭದ್ರಾವತಿ : ತಾಲೂಕಿನ ಸುಣ್ಣದಹಳ್ಳಿ ಗಾಂಧಿನಗರ ಗ್ರಾಮದ ನಿವಾಸಿ ಜಿ. ಮಂಜುನಾಥ್‌ರವರನ್ನು ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕರನ್ನಾಗಿ ನೇಮಕಗೊಳಿಸಿ ಸಮಿತಿ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಆದೇಶಿಸಿದ್ದಾರೆ.
ವಿದ್ಯಾರ್ಥಿ ಒಕ್ಕೂಟದ ತತ್ವ ಮತ್ತು ಸಿದ್ದಾಂತಗಳಿಗೆ ಬದ್ಧರಾಗಿ ಹಾಗು ವಿಶ್ವ ಜ್ಞಾನಿ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗು ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪನವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಸಮುದಾಯದ ಜಾಗೃತಿಗಾಗಿ ಹಾಗು ಸಂವಿಧಾನಾತ್ಮಕ ಹಕ್ಕೊತ್ತಾಯಕ್ಕಾಗಿ ಶ್ರಮಿಸುವಂತೆ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.
ನೂತನ ಜಿಲ್ಲಾ ಸಂಚಾಲಕ ಜಿ. ಮಂಜುನಾಥ್‌ರವರನ್ನು ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ತಮ್ಮಣ್ಣ ಸೇರಿದಂತೆ ಸ್ಥಳೀಯ ಮುಖಂಡರು ಅಭಿನಂದಿಸಿದ್ದಾರೆ.
No comments:
Post a Comment