ಭದ್ರಾವತಿ ಶ್ರೀರಾಮನಗರದ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ೧೭೫೨ನೇ ಮದ್ಯವರ್ಜನ ಶಿಬಿರಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಭದ್ರಾವತಿ: ಮದ್ಯವರ್ಜನ ಶಿಬಿರ ರಾಜ್ಯಕ್ಕೆ ಶ್ರೀ ಧರ್ಮಸ್ಥಳ ಧರ್ಮಾಧಿಕಾರಿ, ಪದ್ಮ ವಿಭೂಷಣ ಡಾ. ವೀರೇಂದ್ರ ಹೆಗ್ಗಡೆ ದಂಪತಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ನೀಡಿದ ಮಹತ್ವದ ಕೊಡುಗೆಯಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಎಂ.ಪಾಲಾಕ್ಷಪ್ಪ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಱವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೨, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಬೆಂಗಳೂರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಶಿವಮೊಗ್ಗ ಜಿಲ್ಲಾ ಜನಜಾಗೃತಿ ವೇದಿಕೆ ಹಾಗು ನಾಗತಿಬೆಳಗಲು ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಿವಿಧ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಶ್ರೀರಾಮನಗರದ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ೧೭೫೨ನೇ ಮದ್ಯವರ್ಜನ ಶಿಬಿರಕ್ಕೆ ಗುರುವಾರ ಅವರು ಚಾಲನೆ ನೀಡಿ ಮಾತನಾಡಿದರು.
ಸಂಕಷ್ಟದ ಸ್ಥಿತಿಗೆ ಸಿಲುಕಿದ ಅನೇಕ ಕುಟುಂಬಗಳು ಮದ್ಯವರ್ಜನ ಶಿಬಿರದಿಂದಾಗಿ ಸಮಾಜದ ಮುಖ್ಯವಾಹಿನಿಯಲ್ಲಿ ನೆಮ್ಮದಿಯ ಬದುಕು ಕಂಡುಕೊಂಡಿವೆ. ತಂದೆ-ತಾಯಿ, ಗಂಡ-ಹೆಂಡತಿ, ಮಕ್ಕಳು ಸಾಮರಸ್ಯದಿಂದ ಬದುಕುವ ವಾತಾವರಣ ನಿರ್ಮಾಣಗೊಂಡಿದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಆರ್.ಕರುಣಾಮೂರ್ತಿ ಮಾತನಾಡಿ, ಅನೇಕರ ಮನಪರಿವರ್ತನೆಗೆ ಮದ್ಯವರ್ಜನ ಶಿಬಿರ ಸಹಕಾರಿಯಾಗಿದೆ. ಇದರಿಂದ ಬಹಳಷ್ಟು ಕುಟುಂಬಗಳು ಸುಧಾರಣೆಗೆ ಬಂದಿವೆ ಎಂದರು.
ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಎಲ್ ಯಶೋಧರಯ್ಯ, ತಾಲೂಕು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಎಸ್.ಎಂ ರಮೇಶ್, ಪೊಲೀಸ್ ನಗರ ವೃತ್ತ ನಿರೀಕ್ಷಕ ಜೆ. ಶ್ರೀಶೈಲ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಱವೃದ್ಧಿ ಯೋಜನೆ .ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕ ಜೆ. ಚಂದ್ರಶೇಖರ್, ವೀರಾಪುರ ಗ್ರಾಪಂ ಅಧ್ಯಕ್ಷ ಪಿ. ರಂಗಸ್ವಾಮಿ, ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಜಿ. ಆನಂದ್, ಸದಸ್ಯರಾದ ಜಯರಾಮ್ ಗೊಂದಿ, ಪಿ. ಪಾರ್ವತಮ್ಮ, ಕ್ಷೇತ್ರ ಯೋಜನಾಧಿಕಾರಿ-೨ ಮಾಧವ, ಮೇಲ್ವಿಚಾರಕ ಪಿ. ಶ್ರೀನಿವಾಸ್, ಜಿ.ಎಂ ನಿಂಗಪ್ಪ, ಎಚ್.ಆರ್ ಮಹೇಶ್ ಕುಮಾರ್, ರಾಜು ರೇವಣಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment