ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ನಾಮಫಲಕ ಬಿಳಿಕಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಅನಾವರಣಗೊಳಿಸಿದರು.
ಭದ್ರಾವತಿ: ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪ ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ನಾಮಫಲಕ ಬಿಳಿಕಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಅನಾವರಣಗೊಳಿಸಿದರು.
ಕಳೆದ ೨ ವರ್ಷಗಳ ಹಿಂದೆ ದಿವಂಗತ ಲಕ್ಷ್ಮಮ್ಮನವರ ೨ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಆರಂಭಗೊಂಡ ಟ್ರಸ್ಟ್ ಈಗಾಗಲೇ ಕೆಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು, ಇನ್ನೂ ಹೆಚ್ಚಿನ ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕೆಂಬ ಉದ್ದೇಶ ಹೊಂದಿದೆ ಎಂದು ಟ್ರಸ್ಟ್ ಪ್ರಮುಖರು, ಪತ್ರಕರ್ತ ಅನಂತಕುಮಾರ್ ಹೇಳಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿದ್ದರು. ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಸದಸ್ಯ ಚನ್ನಪ್ಪ, ಪ್ರಮುಖರಾದ ಎಸ್.ಎಸ್ ಭೈರಪ್ಪ, ಟಿ. ರಾಜೇಂದ್ರ, ವೈ. ನಟರಾಜ್, ಪ್ರಕಾಶ್‌ಕಾರಂತ್, ಮರಿಯಪ್ಪ, ಜಯಲಕ್ಷ್ಮೀ, ಎಚ್.ಆರ್ ಮಮತ, ಚಂದ್ರಶೇಖರ್, ಟಿ.ಎಚ್ ಸಂತೋಷ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಲಕ್ಷ್ಮೀ ಪೂಜೆ ನೆರವೇರಿಸಿ ಸಸಿಗಳನ್ನು ವಿತರಿಸಿ ಟ್ರಸ್ಟ್ ಮುಂದಿನ ಕಾರ್ಯಗಳಿಗೆ ಸಹಕಾರ ಕೋರಲಾಯಿತು.
No comments:
Post a Comment