ಭದ್ರಾವತಿ: ತಾಲೂಕಿನ ಅರಳಿಹಳ್ಳಿ ಗ್ರಾಮದ ಬಸ್ ನಿಲ್ದಾಣದ ಸಮೀಪ ಓ.ಸಿ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ದೇವೇಂದ್ರಪ್ಪ ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ರಫಿ ಅಹಮದ್ ಅಲಿಯಾಸ್ ಸುಂದರ್ ಎಂಬಾತನ ವಿರುದ್ಧ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿದ್ದಾರೆ.
No comments:
Post a Comment