ಭದ್ರಾವತಿ: ಕುಡಿದು ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿದ್ದ ಸವಾರನೊಬ್ಬನಿಗೆ ಸ್ಥಳೀಯ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ೧೧ ಸಾವಿರ ರು. ದಂಡ ವಿಧಿಸಿದೆ.
ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಯಶ್ರೀ ವೃತ್ತದಲ್ಲಿ ಠಾಣಾಧಿಕಾರಿ ರಮೇಶ್‌ರವರು ಡಿ.೪ರಂದು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ ದ್ವಿಚಕ್ರ ವಾಹನ ಸವಾರನೋರ್ವ ಮದ್ಯಪಾನ ಮಾಡಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ೧೧ ಸಾವಿರ ರು. ದಂಡ ವಿಧಿಸಿದೆ ಆದೇಶಿಸಿದೆ.
No comments:
Post a Comment