ಕೋಟ್ಪಾ ಕಾಯ್ದೆಯಡಿ ಭದ್ರಾವತಿ ನಗರದ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಯಶ್ರೀ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಸುತ್ತಾಮುತ್ತ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಿರುವ ಘಟನೆ ನಡೆದಿದೆ.
ಭದ್ರಾವತಿ : ಕೋಟ್ಪಾ ಕಾಯ್ದೆಯಡಿ ನಗರದ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಜಯಶ್ರೀ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಸುತ್ತಾಮುತ್ತ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಿರುವ ಘಟನೆ ನಡೆದಿದೆ.
೩೨ ಪ್ರಕರಣಗಳನ್ನು ದಾಖಲಿಸಿ ಒಟ್ಟು ರು. ೬ ಸಾವಿರ ದಂಡ ವಿಧಿಸಲಾಗಿದೆ. ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ, ಚೇತನ್, ಆಕಾಶ್ ಹಾಗೂ ಪೊಲೀಸ್ ಸಿಬ್ಬಂದಿ ಎಚ್. ಪ್ರಸನ್ನ ಪಾಲ್ಗೊಂಡಿದ್ದರು.
No comments:
Post a Comment