ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಮೂಲಕ ಹುಟ್ಟುಹಬ್ಬ ಆಚರಣೆ
ಭದ್ರಾವತಿಯಲ್ಲಿ ಈ ಬಾರಿ ಯುವ ಮುಖಂಡ ಬಿ.ಎಸ್ ಬಸವೇಶ್ ಹುಟ್ಟುಹಬ್ಬ ಹಲವು ವಿಭಿನ್ನ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಆಯೋಜನೆ ಮೂಲಕ ವಿಶೇಷವಾಗಿ ಆಚರಿಸಲಾಯಿತು.
ಭದ್ರಾವತಿ : ಈ ಬಾರಿ ಯುವ ಮುಖಂಡ ಬಿ.ಎಸ್ ಬಸವೇಶ್ ಹುಟ್ಟುಹಬ್ಬ ಹಲವು ವಿಭಿನ್ನ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಆಯೋಜನೆ ಮೂಲಕ ವಿಶೇಷವಾಗಿ ಆಚರಿಸಲಾಯಿತು.
ಹುಟ್ಟುಹಬ್ಬ ಆಚರಣೆಗಾಗಿ ಸುಮಾರು ೧ ತಿಂಗಳಿನಿಂದ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಸಂಗೊಳ್ಳಿ ರಾಯಣ್ಣ ಯುವ ವೇದಿಕೆ, ಬಸವೇಶ್ ಅಭಿಮಾನಿ ಬಳಗ ಹಾಗು ಸ್ಪುಟ್ನಿಕ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಮತ್ತು ಇನ್ನಿತರ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಬೃಹತ್ ಉಚಿತ ರಕ್ತದಾನ, ನೇತ್ರದಾನ ನೋಂದಣಿ ಶಿಬಿರ ಹಾಗು ಕನ್ನಡಕ ವಿತರಣೆ ಮತ್ತು ರಾಜ್ಯಮಟ್ಟದ ಬಾಲಕ ಮತ್ತು ಬಾಲಕಿಯರ ಜ್ಯೂನಿಯರ್ ಬಾಲ್ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ ಶಿಪ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಬಸವೇಶ್ ತಮ್ಮ ಹುಟ್ಟುಹಬ್ಬಕ್ಕೆ ತಾವೇ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ತಾಲೂಕು ಸವಿತಾ ಸಮಾಜ ಮತ್ತು ದಯಾ ಸಾಗರ ಟ್ರಸ್ಟ್ ವತಿಯಿಂದ ಉಚಿತ ಕೇಶವಿನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೆ ರೀತಿ ನಗರದ ವಿವಿಧೆಡೆ ವಿವಿಧ ಸಂಘ-ಸಂಸ್ಥೆಗಳಿಂದ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಉದ್ಯಮಿ ಬಿ.ಕೆ ಶಿವಕುಮಾರ್, ಮುಖಂಡರಾದ ಎಸ್. ಅರುಣ್‌ಕುಮಾರ್, ಎಚ್. ರವಿಕುಮಾರ್, ಸಂಗೊಳ್ಳಿ ರಾಯಣ್ಣ ಯುವ ವೇದಿಕೆ ಪ್ರಮುಖರಾದ ಅಭಿಲಾಷ್, ನಾಗಭೂಷಣ್, ರಬ್ಬರ್ ಕಾಡು ನಾಗರಾಜ್, ಕುಮಾರ್(ಮಾಸ್ಟರ್), ಸ್ಪುಟ್ನಿಕ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ರಾಜು, ತಮಿಳ್ ಸಂಗಮ್ ಅಧ್ಯಕ್ಷ ಚಂದ್ರಶೇಖರ್, ಕೇಸರಿ ಪಡೆ ಗಿರೀಶ್, ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್ ಮುಸ್ವೀರ್ ಬಾಷಾ ಸೇರಿದಂತೆ ನೂರಾರು ಮಂದಿ ಮುಖಂಡರು, ಅಭಿಮಾನಿಗಳು ಹುಟ್ಟುಹಬ್ಬ ಯಶಸ್ವಿಗಾಗಿ ಶ್ರಮಿಸಿದರು.
ಭದ್ರಾವತಿಯಲ್ಲಿ ಈ ಬಾರಿ ಯುವ ಮುಖಂಡ ಬಿ.ಎಸ್ ಬಸವೇಶ್ ಹುಟ್ಟುಹಬ್ಬ ಹಲವು ವಿಭಿನ್ನ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಆಯೋಜನೆ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಬಸವೇಶ್ ಅವರನ್ನು , ಸ್ಪುಟ್ನಿಕ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
No comments:
Post a Comment