ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ, ಎಚ್‌ಡಿಎಫ್‌ಸಿ ಬ್ಯಾಂಕ್ ಹಾಗು ಪೊಲೀಸ್ ಉಪವಿಭಾಗದ ವತಿಯಿಂದ ಭದ್ರಾವತಿ ನ್ಯೂಟೌನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ, ಎಚ್‌ಡಿಎಫ್‌ಸಿ ಬ್ಯಾಂಕ್ ಹಾಗು ಪೊಲೀಸ್ ಉಪವಿಭಾಗದ ವತಿಯಿಂದ ನಗರದ ನ್ಯೂಟೌನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಉಪವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು, ಕುಟುಂಬ ವರ್ಗದವರು ಮಾತ್ರವಲ್ಲದೆ ಸಾರ್ವಜನಿಕರು ಸಹ ಶಿಬಿರದಲ್ಲಿ ಪಾಲ್ಗೊಂಡಿದ್ದರು. ೬ ಜನ ಮಹಿಳೆಯರು ಸೇರಿದಂತೆ ಒಟ್ಟು ೫೪ ಮಂದಿ ರಕ್ತದಾನ ಮಾಡಿದರು.
ವೈದ್ಯರಾದ ಡಾ. ಚೈತನ್ಯ ಮತ್ತು ಡಾ. ಪ್ರದ್ಯುಹ್ನ ನೇತೃತ್ವದ ತಂಡ ಹಾಗು ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ವಿವಿಧ ಠಾಣೆಗಳ ಠಾಣಾಧಿಕಾರಿಗಳಾದ ಶಾಂತಲಾ, ರಮೇಶ್, ಕೃಷ್ಣಕುಮಾರ್, ಶರಣಪ್ಪ ಹಂಡ್ರಗಲ್, ಸಹಾಯಕ ಠಾಣಾಧಿಕಾರಿಗಳಾದ ಸೂರ್ಯನಾರಾಯಣ, ಶಿವಸ್ವಾಮಿ, ಸಿಬ್ಬಂದಿ ಹಾಲೇಶಪ್ಪ, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಶಿಬಿರದ ಯಶಸ್ವಿಗೆ ಹಲವು ಸಿಬ್ಬಂದಿ ಪಾಲ್ಗೊಂಡಿದ್ದರು.
No comments:
Post a Comment