ಭದ್ರಾವತಿ ನಗರದ ಅಪೇಕ್ಷ ಕಲಾವೃಂದದ ವತಿಯಿಂದ ಪ್ರತಿವರ್ಷ ವೀರಯೋಧ ಮುರಳಿ ಸ್ಮರಣಾರ್ಥ ನೀಡಲಾಗುವ ೨೦೨೩ನೇ ಸಾಲಿನ ವೀರಯೋಧ ಮುರಳಿ ಪ್ರಶಸ್ತಿಯನ್ನು ಈ ಬಾರಿ ಕನ್ನಡಪ್ರಭ ಪತ್ರಿಕೆ ವರದಿಗಾರ ಅನಂತ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.
ಭದ್ರಾವತಿ: ನಗರದ ಅಪೇಕ್ಷ ಕಲಾವೃಂದದ ವತಿಯಿಂದ ಪ್ರತಿವರ್ಷ ವೀರಯೋಧ ಮುರಳಿ ಸ್ಮರಣಾರ್ಥ ನೀಡಲಾಗುವ ೨೦೨೩ನೇ ಸಾಲಿನ ವೀರಯೋಧ ಮುರಳಿ ಪ್ರಶಸ್ತಿಯನ್ನು ಈ ಬಾರಿ ಕನ್ನಡಪ್ರಭ ಪತ್ರಿಕೆ ವರದಿಗಾರ ಅನಂತ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು.
ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಪೇಕ್ಷ ನೃತ್ಯ ಕಲಾವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಂಗೀತ ಸಂಭ್ರಮ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಬಿ.ಕೆ ಜಗನ್ನಾಥ್, ರೇವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಸಮಾಜ ಸೇವಕ ಪೊಲೀಸ್ ಉಮೇಶ್, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜು, ಅಪೇಕ್ಷ ನೃತ್ಯಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ, ಅಪೇಕ್ಷ ಮಂಜುನಾಥ್, ಸಾಹಿತಿ ಅರಳಿಹಳ್ಳಿ ಅಣ್ಣಪ್ಪ, ಶಿಕ್ಷಕ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment