ಭದ್ರಾವತಿ: ಅಪೇಕ್ಷ ನೃತ್ಯ ಕಲಾವೃಂದ, ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಡಿ.೨೬ರ ಮಂಗಳವಾರ ಮಧ್ಯಾಹ್ನ ೩ ಗಂಟೆಗೆ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವ, ಸಂಗೀತ ಸಂಭ್ರಮ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಂಗೀತ ಸಂಭ್ರಮ ಮಧ್ಯಾಹ್ನ ೩ ಗಂಟೆಗೆ ಆರಂಭವಾಗಲಿದ್ದು, ತಬಲ ವಾದಕ ದೇವನೂರು ರುದ್ರೇಶ್, ರಿದಮ್ ಪ್ಯಾಡ್ ವಾದಕ ಮೋಹನ್‌ಕುಮಾರ್, ಕೀ ಬೋರ್ಡ್ ವಾದಕ ಅಂತೋಣಿ ಮ್ಯಾಥ್ಯೂಸ್, ಗಾಯಕ ಡಾ. ಶ್ರೀಧರ್ ಕುಲಕರ್ಣಿ, ವಿದುಷಿ ಶೃತಿ ಕುಲಕರ್ಣಿ ಮತ್ತು ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಸಂಜೆ ೬ ಗಂಟೆಗೆ ವಿವಿಧ ಕ್ಷೇತ್ರದ ಸಾಧಕರಿಗೆ ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ೨೦೨೨ ಹಾಗು ೨೩ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಪೇಕ್ಷ ನೃತ್ಯ ಕಲಾ ವೃಂದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸಿ.ಆರ್ ಪರಮೇಶ್ವರಪ್ಪ ಅಪೇಕ್ಷ ರಾಜ್ಯ ಪ್ರಶಸ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್ ಕನ್ನಡ ಕುವರ/ಕುವರಿ ಪ್ರಶಸ್ತಿ ಹಾಗು ಸಮಾಜ ಸೇವಕ ಸ್ನೇಹಜೀವಿ ಉಮೇಶ್ ವೀರಯೋಧ ಮುರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಿವೃತ್ತ ಪ್ರಾಧ್ಯಾಪಕಿ ಪ್ರೊ.ಎಸ್.ಎಸ್ ವಿಜಯಾದೇವಿ, ನಗರಸಭೆ ಸದಸ್ಯೆ ಬಿ.ಟಿ ನಾಗರಾಜ್, ವೈದ್ಯ ಡಾ. ಶಿವಪ್ರಕಾಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಸಂಸ್ಥಾಪಕಿ ಲತಾ ರಾಬರ್ಟ್, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜು ಮತ್ತು ಡಾ. ವಿಷ್ಣು ಸೇವಾ ಸಮಿತಿ ಅಧ್ಯಕ್ಷ ಎಂ. ಶ್ರೀನಿವಾಸ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
No comments:
Post a Comment