ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ(ಪರಿಶಿಷ್ಟ ಜಾತಿ) ಸಮಾಜದ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನ ಆಚರಿಸಲಾಯಿತು.
ಭದ್ರಾವತಿ : ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿಗಳ(ಪರಿಶಿಷ್ಟ ಜಾತಿ) ಸಮಾಜದ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನ ಆಚರಿಸಲಾಯಿತು.
ಸಮಾಜದ ಅಧ್ಯಕ್ಷ ಚನ್ನಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಬದುಕು, ಸಾಧನೆ ಹಾಗು ಕೊಡುಗೆಗಳನ್ನು ಸ್ಮರಿಸಲಾಯಿತು.
ಸಮಾಜದ ಪ್ರಮುಖರಾದ ಗೌರವಾಧ್ಯಕ್ಷ ಎಸ್.ಎಸ್ ಭೈರಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಎಂ ಮಹಾದೇವಯ್ಯ, ಮಾಜಿ ಅಧ್ಯಕ್ಷ ಬದರಿನಾರಾಯಣ, ಸಂಸ್ಥಾಪಕ ಡಿ. ನರಸಿಂಹಮೂರ್ತಿ, ಹುಚ್ಚಯ್ಯ, ಯು. ಮಹಾದೇವಪ್ಪ, ಎ. ತಿಪ್ಪೇಸ್ವಾಮಿ, ಮಾಯಮ್ಮ, ಕಮಲಕುಮಾರಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment