ಮೆಸ್ಕಾಂ ಭದ್ರಾವತಿ ನಗರದ ಜೆಪಿಎಸ್ ಕಾಲೋನಿಯಲ್ಲಿರುವ ಕಾರ್ಯನಿರ್ವಾಹಕ ಇಂಜಿನಿಯರ್ ವಿಭಾಗೀಯ ಕಛೇರಿಯಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನ ಆಚರಿಸಲಾಯಿತು.
ಭದ್ರಾವತಿ : ಮೆಸ್ಕಾಂ ನಗರದ ಜೆಪಿಎಸ್ ಕಾಲೋನಿಯಲ್ಲಿರುವ ಕಾರ್ಯನಿರ್ವಾಹಕ ಇಂಜಿನಿಯರ್ ವಿಭಾಗೀಯ ಕಛೇರಿಯಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನ ಆಚರಿಸಲಾಯಿತು.
ಕಾರ್ಯನಿರ್ವಾಹಕ ಇಂಜಿನಿಯರ್ ಬೀರಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಬದುಕು, ಸಾಧನೆ, ಕೊಡುಗೆಗಳನ್ನು ಸ್ಮರಿಸಲಾಯಿತು.
ಲೆಕ್ಕಾಧಿಕಾರಿ ಅಶ್ವಿನ್‌ಕುಮಾರ್, ಕಾರ್ಯನಿರ್ವಾಹಕ ಇಂಜಿನಿಯರ್(ಪಾ) ಗಿರೀಶ್, ಲೆಕ್ಕಾಧಿಕಾರಿ(ಆಂ.ಪಾ) ಮಲ್ಲೇಶ್ ನಾಯ್ಕ, ಉಪ ವಿಭಾಗದ ಎಲ್ಲಾ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳು, ಎಲ್ಲಾ ಘಟಕಗಳ ಮತ್ತು ಉಪ ವಿಭಾಗ ಹಾಗು ಕಛೇರಿಗಳ ಸಿಬ್ಬಂದಿ ವರ್ಗದವರು, ನೌಕರರು ಪಾಲ್ಗೊಂಡಿದ್ದರು.
No comments:
Post a Comment