ಅನನ್ಯೋತ್ಸವದಲ್ಲಿ ಡಾ. ಡಿ. ವಿರೇಂದ್ರ ಹೆಗಡೆಯವರ ಆಪ್ತ ಕಾರ್ಯದರ್ಶಿ
ಭದ್ರಾವತಿ ಅಪ್ಪರ್‌ಹುತ್ತಾ ಅನನ್ಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅನನ್ಯೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗಡೆಯವರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾರ್ಧನ್ ಪಾಲ್ಗೊಂಡಿದ್ದರು.
ಭದ್ರಾವತಿ : ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಏನಾದರೂ ಸಾಧಿಸುವ ಗುರಿ ಹೊಂದಿರಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗಡೆಯವರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾರ್ಧನ್ ಹೇಳಿದರು.
ಅವರು ನಗರದ ಅಪ್ಪರ್‌ಹುತ್ತಾ ಅನನ್ಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅನನ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳು ತಮ್ಮ ಜೀವನದಲ್ಲಿ ಯಾವುದಾದರೂ ಗುರಿ ಹೊಂದಿದ್ದಲ್ಲಿ ಮಾತ್ರ ಏನಾದರೂ ಸಾಧಿಸಬಹುದು. ಯಾವುದೇ ರೀತಿಯ ವ್ಯಸನಗಳಿಗೆ ಒಳಗಾಗದೆ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದರು.
ಓದುವಿನ ಜೊತೆಗೆ ಕ್ರೀಡೆ ಹಾಗು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಹ ಕಡ್ಡಾಯವಾಗಿ ತೊಡಗಿಸಿಕೊಂಡು ತಮ್ಮಲ್ಲಿನ ಪ್ರತಿಭೆ ಅನಾವರಣಗೊಳಿಸಬೇಕು. ಇದರಿಂದ ದೈಹಿಕ ಹಾಗು ಮಾನಸಿಕವಾಗಿ ಸದೃಢತೆ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಬೆಳವಣಿಗೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಕೆ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ಸಂಜಯ್ ಕುಮಾರ್, ವಿಶ್ವಸ್ಥರಾದ ಸಿ.ಎನ್ ಗಿರೀಶ್, ಆಡಳಿತಾದಿಕಾರಿ ವೇಣುಗೋಪಾಲ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಕಲ್ಲೇಶ್ ಕುಮಾರ್ ಸ್ವಾಗತಿಸಿ, ಉಪ ಮುಖ್ಯ ಶಿಕ್ಷಕಿ ಸುನಿತಾ ನಟರಾಜ್ ಪ್ರತಿಭಾ ಪರುಸ್ಕಾರ ನಡೆಸಿಕೊಟ್ಟರು. ಅನನ್ಯ ಹ್ಯಾಪಿ ಹಾರ್ಟ್ ಮುಖ್ಯ ಶಿಕ್ಷಕಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು. ಹರೀಶ್ ಕುಮಾರ್ ವಂದಿಸಿದರು.
No comments:
Post a Comment