ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟ
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತ ತಂಡಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಬಹುಮಾನಗಳನ್ನು ವಿತರಿಸಿದರು.
ಭದ್ರಾವತಿ, ಜ. ೧೦: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗು ತಾಲೂಕು ಪಂಚಾಯತ್ ಸಹಯೋಗದೊಂದಿಗೆ ಮಂಗಳವಾರ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ(ಕಬಡ್ಡಿ ಮತ್ತು ಖೋ ಖೋ ಆಯ್ಕೆ ಸ್ಪರ್ಧೆಗಳು) ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯಿತು.
ಕಬಡ್ಡಿ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಅರಳಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ಮಹಿಳೆಯರ ವಿಭಾಗದಲ್ಲಿ ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ಪ್ರಥಮ ಸ್ಥಾನ ಹಾಗೂ ಖೋ ಖೋ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಹಿರಿಯೂರು ಗ್ರಾಮ ಪಂಚಾಯಿತಿ ಮತ್ತು ಮಹಿಳೆಯರ ವಿಭಾಗದಲ್ಲಿ ಅರಕೆರೆ ಗ್ರಾಮ ಪಂಚಾಯಿತಿ ಪ್ರಥಮ ಸ್ಥಾನ ಪಡೆದುಕೊಂಡವು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಿದರು. ದೈಹಿಕ ಶಿಕ್ಷಕ ಅಪೇಕ್ಷ ಮಂಜುನಾಥ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್, ಉಪೇಂದ್ರ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.