ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗು ಶಿಕ್ಷಣ, ಆರೋಗ್ಯ, ಪೊಲೀಸ್, ನ್ಯಾಯಾಂಗ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂಧಿಗಳನ್ನು ಭದ್ರಾವತಿಯಲ್ಲಿ ಆಯೋಜಿಸಲಾಗಿದ್ದ ೭೪ನೇ ಗಣರಾಜ್ಯೋತ್ಸವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು
ಭದ್ರಾವತಿ, ಜ. ೨೬: ದೇಶದ ಸಂವಿಧಾನ ಪ್ರಪಂಚದಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದ್ದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಅರಿತುಕೊಂಡು ಮುನ್ನಡೆಯಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೪ನೇ ಗಣರಾಜ್ಯೋತ್ಸವದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಡಾ.ಬಿ.ಆರ್ ಅಂಬೇಡ್ಕರ್‌ರವರು ರಚಿಸಿದ ಸಂವಿಧಾನದಿಂದಾಗಿ ನಾವೆಲ್ಲರೂ ಶಾಂತಿ, ಸೌಹಾರ್ದತೆಯಿಂದ ಬದಕಲು ಸಾಧ್ಯವಾಗಿದೆ. ಗಣತಂತ್ರ ವ್ಯವಸ್ಥೆ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸುವಲ್ಲಿ ಸಂವಿಧಾನ ಪರಿಣಾಮಕಾರಿಯಾಗಿದೆ. ಇಂತಹ ಶ್ರೇಷ್ಠ ಸಂವಿಧಾನಕ್ಕೆ ನಾವೆಲ್ಲರೂ ಗೌರವ ನೀಡುವ ಜೊತೆಗೆ ನಮ್ಮ ಭವಿಷ್ಯದ ಮುಂದಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಮುನ್ನಡೆಯೋಣ ಎಂದರು.
ಇದಕ್ಕೂ ಮೊದಲು ತಹಸೀಲ್ದಾರ್ ಆರ್. ಪ್ರದೀಪ್ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಸೇರಿದಂತೆ ನಗರಸಭಾ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗು ಶಿಕ್ಷಣ, ಆರೋಗ್ಯ, ಪೊಲೀಸ್, ಅರಣ್ಯ, ನ್ಯಾಯಾಂಗ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂಧಿಗಳನ್ನು ಹಾಗು ಹಿರಿಯ ಕಟ್ಟಡ ಕಾರ್ಮಿಕ ಮತ್ತು ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಲಾವಿದ ಅಪೇಕ್ಷ ಮಂಜುನಾಥ್ ನಿರೂಪಿಸಿದರು.